ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಥಾಪಿಸಲಾಗಿರುವ ನೂತನವಾಗಿ ಚುನಾವಣಾ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟನೆ ಮಾಡಿದರು.
ಇಲ್ಲಿನ ದೇಶಪಾಂಡೆನಗರದ ಬಿಜೆಪಿ ಕಾರ್ಯಾಲಯದಲ್ಲಿ ಪಶ್ಚಿಮ ಪದವೀಧರ ಮತ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಎಸ್.ವಿ.ಸಂಕನೂರ ಸ್ಪರ್ಧಿಸುತ್ತಿದ್ದು,ಈ ಹಿನ್ನೆಲೆಯಲ್ಲಿ ಪ್ರಚಾರಾರ್ಥವಾಗಿ ಚುನಾವಣಾ ಕಾರ್ಯಾಲಯ ಉದ್ಘಾಟಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮೋಹನ ಲಿಂಬಿಕಾಯಿ, ಎಸ್.ವಿ.ಸಂಕನೂರ, ಸಿ.ಎಂ.ಲಿಂಬಣ್ಣವರ,ಮಹೇಶ ಟೆಂಗಿನಕಾಯಿ, ಬಸವರಾಜ ಕುಂದಗೋಳಮಠ ಸೇರಿದಂತೆ ಇತರರು ಇದ್ದರು.
Kshetra Samachara
10/10/2020 05:37 pm