ಹುಬ್ಬಳ್ಳಿ: ಸತತ ಹೋರಾಟದಿಂದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದ್ದು, ಇಂದು ಗಣೇಶ್ ವಿಸರ್ಜನೆ ಕಾರ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ 11 ದಿನಗಳ ಕಾಲ ಆಚರಣೆ ಮಾಡಲು ಅವಕಾಶ ನೀಡಲು ಒತ್ತಾಯಿಸುತ್ತೇವೆ. ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರ ಜೊತೆ ನಮ್ಮ ಪ್ರತಿನಿಧಿ ಈರಣ್ಣ ಚಿಟ್‌ಚಾಟ್ ಮಾಡಿರುವ ನೋಡೋಣ ಬನ್ನಿ....
Kshetra Samachara
02/09/2022 02:22 pm