ಹುಬ್ಬಳ್ಳಿ- 323 ಕೋಟಿ ವೆಚ್ಚದ 2 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಿಲಾನ್ಯಾಸ ಕಾರ್ಯಕ್ರಮಕ್ಕೆ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತೀನ್ ಗಡ್ಕರಿ ಅವರು ವರ್ಚುವಲ್ ವೇದಿಕೆ ಮೂಲಕ ಹುಬ್ಬಳ್ಳಿಯಲ್ಲಿಂದು ಚಾಲನೆ ನೀಡಿದರು. ನಂತರ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಹಾಗೂ ದಾಸ್ತಿಕೊಪ್ಪ, ಕಲಘಟಗಿ ತಾಲ್ಲೂಕು ಸಮೀಪ ಚತುಷ್ಪಥ ರಸ್ತೆ ಹಾಗೂ ಸಣ್ಣ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಮಾಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಶಾಸಕರಾದ ಪ್ರಸಾದ್ ಅಬ್ಬಯ್ಯ, ಸಿ.ಎಂ. ನಿಂಬಣ್ಣವರ, ಅರವಿಂದ ಬೆಲ್ಲದ, ಅಮೃತ ದೇಸಾಯಿ, ಶಂಕರ ಪಾಟೀಲ ಮುನೇನಕೊಪ್ಪ, ವಿ.ಪ ಸದಸ್ಯ ಬಸವರಾಜ ಹೊರಟ್ಟಿ ಇದ್ದರು....
Kshetra Samachara
15/01/2021 02:59 pm