ಹುಬ್ಬಳ್ಳಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಆದರ್ಶ ತತ್ವಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೈಮಗ್ಗ ಮತ್ತು ಜವಳಿ, ಸಕ್ಕರೆ ಖಾತೆ ಸಚಿವರಾದ ಶಂಕರ ಬ. ಪಾಟೀಲ್ ಮುನೇನಕೊಪ್ಪ ಹೇಳಿದರು.
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 152ನೇ ಜಯಂತಿ ಅಂಗವಾಗಿ ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಮಹಾತ್ಮಾ ಗಾಂಧೀಜಿಯವರ ಮೂರ್ತಿಗೆ ಸಚಿವರಾದ ಮುನೇನಕೊಪ್ಪ ರವರು ಮಾಲಾರ್ಪಣೆ ಮಾಡಿ, ನಂತರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ರಾಷ್ಟ್ರಪಿತ ತೋರಿದ ಖಾದಿ ಉದ್ಯಮ ಪುನಶ್ಚೇತನ ಆಗಬೇಕಿದೆ. ನೇಕಾರಿಕೆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಿದ್ದು, ಸಬ್ಸಿಡಿ, ಸಾಲಮನ್ನಾ, ಉದ್ಯೋಗ ಸೃಷ್ಟಿ ಮೂಲಕ ಸರ್ಕಾರ ನೇಕಾರಿಕೆ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ಸರ್ಕಾರ ಇನ್ನಷ್ಟು ಪ್ರೋತ್ಸಾಹ ನೀಡಲಿದೆ. ಸೂರ್ಯ ಚಂದ್ರ ಇರುವವರಿಗೂ ಖಾದಿಯನ್ನು ನಾವು ಜೀವನದಕ್ಕೂ ತೆಗೆದುಕೊಂಡು ಹೋಗಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಗಣ್ಯರು ಹಾಗೂ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
02/10/2021 11:23 am