ಹುಬ್ಬಳ್ಳಿ: ಬೆಂಗಳೂರು ಹೊರತುಪಡಿಸಿ ಎರಡನೇ ಸ್ತರಗಳ ನಗರಗಳ ಅಭಿವೃದ್ಧಿ ಹಾಗೂ ಕೈಗಾರಿಕೆಗಳನ್ನು ಸೆಳೆಯುವ ಬಿಯಾಂಡ್ ಬೆಂಗಳೂರು ಕಾರ್ಯಕ್ರಮಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಭಾಗಿಯಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ, ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಆವಿಷ್ಕಾರ ಮತ್ತು ಎರಡನೇ ಸ್ತರಗಳ ನಗರ ಬೆಳವಣಿಗೆ ಕುರಿತಂತೆ ಉದ್ಯಮಿಗಳು, ತಂತ್ರಜ್ಞರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಸಲಹೆ ಸೂಚನೆ ನೀಡಿದರು. ಔದ್ಯೋಗಿಕವಾಗಿ ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿಯಲ್ಲಿ ಬೆಂಗಳೂರಿನಂತೆ ಅಭಿವೃದ್ಧಿ ಹಾಗೂ ಕೈಗಾರಿಕೆಗಳ ಆಕರ್ಷಣೆಗೆ ಒತ್ತು ನೀಡುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.
Kshetra Samachara
05/10/2021 04:43 pm