ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬೆಳಗಾವಿಯಿಂದ ಬೆಂಗಳೂರು ವರೆಗೆ ಚನ್ನಮ್ಮಳ ಜ್ಯೋತಿ ಬೆಳಗಿಸಿದ್ದು ನನ್ನ ಸೌಭಾಗ್ಯ! ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಬ್ರಿಟಿಷರ ವಿರುದ್ಧ ಹೋರಾಡಿದ ನಾಡಿನ ಧೀಮಂತ, ಶ್ರೇಷ್ಠ ಪ್ರಥಮ ಮಹಿಳೆಯಾದ ರಾಣಿ ಕಿತ್ತೂರ ರಾಣಿ ಚನ್ನಮ್ಮಳ ತ್ಯಾಗ, ಬಲಿದಾನ ಎಲ್ಲ ಜನತೆ ಸ್ಮರಿಸುವಂತ ದಿನವಾಗಿದೆ. ಬೆಳಗಾವಿಯಿಂದ ಬೆಂಗಳೂರು ವರೆಗೆ ಚನ್ನಮ್ಮಳ ಜ್ಯೋತಿ ಬೆಳಗಿಸಿದ್ದು ನನ್ನ ಸೌಭಾಗ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಬ್ರಿಟಿಷ್ ರ ವಿರುದ್ಧ ರಣಕಹಳೆ ಊದಿದ ರಾಣಿ ಚನ್ನಮ್ಮಳ ಮೂರ್ತಿ ಮಾಡಬೇಕಾದರೆ ಅದು ದೊಡ್ಡ ಹೋರಾಟವಾಗಿತ್ತು. ನಮ್ಮ ತಂದೆಯವರು ಉಸ್ತುವಾರಿ ಸಚಿವರಿದ್ದಾಗ ಎರಡು ವರ್ಷದ ಸುದೀರ್ಘ ಹೋರಾಟದ ಫಲವಾಗಿ ಈ ವೃತ್ತದಲ್ಲಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ ಎಂದರು.

ಈಗ ಕಿತ್ತೂರ ರಾಣಿ ಚನ್ನಮ್ಮ ಉತ್ಸವ ಮಾಡವ ಮಹತ್ತರ ಕಾರ್ಯ ನನ್ನ ಪಾಲಿಗೆ ಬಂದಿದೆ. 2011ರಲ್ಲಿ ನಾನು ಉಸ್ತುವಾರಿ ಸಚಿವನಿದ್ದಾಗ ಕಿತ್ತೂರ ಪ್ರಾಧಿಕಾರ ಮಾಡಿ ಅವತ್ತು ಎಂಟು ಕೋಟಿ ರೂ. ಬಿಡುಗಡೆಗೊಳಿಸಿ ಆ ಕೆಲಸ ಪ್ರಾರಂಭಿಸಲಾಗಿತ್ತು. ಈ ವರ್ಷ 50 ಕೋಟಿ ಕ್ರಿಯಾಯೋಜನೆಗೆ ಅನುಮೋದನೆ ಕೊಟ್ಟಿದೆ ಹಣವನ್ನು ಸಹ ಬಿಡುಗಡೆ ಮಾಡುತ್ತಿದ್ದೇವೆ. ಬರುವ ದಿನಗಳಲ್ಲಿ ಕಿತ್ತೂರ ರಾಣಿ ಚನ್ನಮ್ಮ ಮತ್ತು ಸಂಗೋಳಿ ರಾಯಣ್ಣನ ಎಲ್ಲ ಸೂತ್ರಗಳನ್ನು ಬಿಜೆಪಿ ಸರ್ಕಾರ ಈಡೇರಿಸುತ್ತೆ ಎಂದು ಹೇಳಿದರು.

Edited By : Manjunath H D
Kshetra Samachara

Kshetra Samachara

23/10/2021 11:42 am

Cinque Terre

26.21 K

Cinque Terre

0

ಸಂಬಂಧಿತ ಸುದ್ದಿ