ಹುಬ್ಬಳ್ಳಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತೋತ್ಸವದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಹುಬ್ಬಳ್ಳಿಯಲ್ಲಿಂದು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಹುಬ್ಬಳ್ಳಿಯ ಪ್ರಧಾನ ಅಂಚೆ ಕಚೇರಿಯ ಎದುರಿನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಅವರು, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇನ್ನೂ ಕಾಂಗ್ರೆಸ್ ಮುಖಂಡರಾದ ಅನೀಲಕುಮಾರ ಪಾಟೀಲ ಸೇರಿದಂತೆ ಕಾಂಗ್ರೆಸ್ ಮುಖಂಡರು ವಿಶೇಷ ಗೌರವ ಸಲ್ಲಿಸಿದರು.
Kshetra Samachara
14/04/2022 12:33 pm