ನವಲಗುಂದ: ಎನ್ಎಂಡಿಸಿ, ಸಿಎಸ್ಆರ್ ಕಾರ್ಯ ಚಟುವಟಿಕೆಯ ಭಾಗವಾಗಿ ನವಲಗುಂದ ವಿಧಾನಸಭಾ ಕ್ಷೇತ್ರದ ಅಣ್ಣಿಗೇರಿ ಪಟ್ಟಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪ್ರಸ್ತಾವನೆ ಮೇರೆಗೆ ಐದು ಕೋಟಿ ವೆಚ್ಚದಲ್ಲಿ ನಿರ್ಮಾಣಾಗುತ್ತಿರುವ ಕ್ರೀಡಾ ಸಮುಚ್ಛಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಅಣ್ಣಿಗೇರಿ ದಾಸೋಹ ಮಠದ ಶಿವಕುಮಾರ ಸ್ವಾಮಿಗಳು, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಹಾಗೂ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
08/05/2022 07:25 pm