ಹುಬ್ಬಳ್ಳಿ: 75ನೇ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಬೆಂಗೇರಿಯ ಖಾದಿ ಗ್ರಾಮೋದ್ಯೋಗ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿದ್ಯುಕ್ತವಾಗಿ ಚಾಲನೆ ನೀಡಿದರು.
ವಿವಿಧ ಕಲಾ ತಂಡಗಳಿಂದ ಭಾರತಾಂಬೆಯ ಭಾವಚಿತ್ರದ ಮೆರವಣಿಗೆ ಮತ್ತು ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ಕೂಡ ಎಲ್ಲರ ಗಮನ ಸೆಳೆಯಿತು. ಈಗಾಗಲೇ ಅಮೃತ ಮಹೋತ್ಸವಕ್ಕೆ ಖಾದಿ ಗ್ರಾಮೋದ್ಯೋಗದಿಂದ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದು, ಅದರ ಪೂರ್ವಸಿದ್ಧತಾ ಭಾಗವಾಗಿ ಇಂದು ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ನಡೆಸಲಾಯಿತು.
Kshetra Samachara
25/06/2022 11:49 am