ಹುಬ್ಬಳ್ಳಿ: ರಾಜ್ಯದ ಎಸ್.ಎಸ್.ಕೆ ಸಮಾಜದವತಿಯಿಂದ ನಗರದ ಗೋಕುಲರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ರಾಜ್ಯಮಟ್ಟದ ಯುವ ಸಮಾವೇಶ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು.
ಈ ಸಮಾವೇಶದಲ್ಲಿ ರಾಜ್ಯದ ವಿವಿಧ ತಾಲೂಕಿನಿಂದ ಸುಮಾರು 500 ಕ್ಕೂ ಹೆಚ್ಚು ಯುವ ಪದಾಧಿಕಾರಿಗಳು ಭಾಗವಹಿಸಿದ್ದರು. ಸಮಾವೇಶದಲ್ಲಿ ಶೈಕ್ಷಣಿಕ, ಆರ್ಥಿಕ, ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಶಂಕರಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕ ಅರವಿಂದ ಬೆಲ್ಲದ್, ಶಾಸಕ ಶ್ರೀನಿವಾಸ್ ಮಾನೆ, ಮಾಜಿ ಶಾಸಕ ಅಶೋಕ ಕಾಟವೆ, ನಿಲಕಂಟಸಾ ಜಡಿ, ಮೆಹರವಾಡೆ, ಗೋಪಾಲ ಬದ್ದಿ, ಪ್ರಮುಖರು ಸೇರಿದಂತೆ ಎಸ್.ಎಸ್ ಕೆ ಸಮಾಜದ ಮುಖಂಡರು ಇತರರಿದ್ದರು.
Kshetra Samachara
25/06/2022 06:28 pm