ಧಾರವಾಡ: ಕೇಂದ್ರ ಬಿಜೆಪಿ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರ ಜಾರಿಗೆ ತಂದ ಸುಶಾಸನ ಹಾಗೂ ಗರೀಬ್ ಕಲ್ಯಾಣ ಯೋಜನೆಗಳ ಛಾಯಾಚಿತ್ರ ಪ್ರದರ್ಶನಕ್ಕೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಚಾಲನೆ ನೀಡಿದರು.
ಧಾರವಾಡದ ಕೆಸಿಡಿ ಕಾಲೇಜಿನಲ್ಲಿರುವ ಬಿಬಿಎ ಸಭಾಭವನದಲ್ಲಿ ಈ ಛಾಯಾಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದ ಎಲ್ಲ ಯೋಜನೆಗಳ ಬಗೆಗಿನ ಮಾಹಿತಿ ಹಾಗೂ ಛಾಯಾಚಿತ್ರಗಳನ್ನು ಇಲ್ಲಿ ಪ್ರದರ್ಶನ ಮಾಡಲಾಗುತ್ತಿದ್ದು, ಮೂರು ದಿನಗಳ ಕಾಲ ಈ ಪ್ರದರ್ಶನ ನಡೆಯಲಿದೆ.
ಶಾಸಕರಾದ ಅರವಿಂದ ಬೆಲ್ಲದ ಹಾಗೂ ಅಮೃತ ದೇಸಾಯಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯ್ತಿ ಸಿಇಓ ಸುರೇಶ ಇಟ್ನಾಳ ಸೇರಿದಂತೆ ಇತರರು ಈ ಸಂದರ್ಭದಲ್ಲಿದ್ದರು.
Kshetra Samachara
25/07/2022 02:48 pm