ಹುಬ್ಬಳ್ಳಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜಾರಿ ಮಾಡಿರುವ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತವಾಗಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಮನೆಯ ಮುಂದೇ ಧ್ವಜಾರೋಹಣ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಹೌದು.. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಈ ಬಾರಿ ಅರ್ಥಪೂರ್ಣ ಆಚರಣೆಗೆ ಸರ್ಕಾರ ಮುಂದಾಗಿದ್ದು, ಇದರ ಬೆನ್ನಲ್ಲೇ ಎಲ್ಲೆಡೆಯೂ ರಾಷ್ಟ್ರೀಯ ಧ್ವಜ ರಾರಾಜಿಸುತ್ತಿವೆ. ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವರು ತಮ್ಮ ನಿವಾಸ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಮೂಲಕ ಅಭಿಯಾನದಲ್ಲಿ ಪಾಲ್ಗೊಂಡರು.
Kshetra Samachara
13/08/2022 11:21 am