ಧಾರವಾಡ: ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರದ ಆದೇಶದ ಅನ್ವಯ ಗುತ್ತಿಗೆ ನೇರ ನೇಮಕಾತಿ ಮಾಡುವುದು, ನೇರ ವೇತನ ಪಾವತಿ ಅನುಷ್ಠಾನ ಮಾಡುವುದು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾ ಅರೆ ಬೆತ್ತಲೆ ಪ್ರತಿಭಟನೆ ನಡೆಸಿದರು.
ಗುತ್ತಿಗೆ ಪದ್ಧತಿ ರದ್ದುಪಡಿಸಿ ನೇರ ನೇಮಕಾತಿ, ನೇರ ವೇತನ ಪಾವತಿ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಆದರೆ ಮಹಾನಗರ ಪಾಲಿಕೆ ತೀವ್ರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು..
Kshetra Samachara
24/09/2020 02:40 pm