ಧಾರವಾಡ : ನಗರದ ಧಾರವಾಡದ ಕರ್ನಾಟಕ ನೀರಾವರಿ ನಿಗಮ ಕಚೇರಿಯನ್ನು ಸ್ಥಳಾಂತರ ಮಾಡದಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹಾಗೂ ನೀರಾವರಿ ನಿಗಮದ ಎಮ್ ಡಿ ಮಲ್ಲಿಕಾರ್ಜುನ ಗುಂಗೆ ಮತ್ತು ರಾಜೇಶ್ ಸಿಂಗ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಮನವಿ ಸಲ್ಲಿಸಿದರು.
ಈ ಕುರಿತು ಚರ್ಚಾಕೂಟವನ್ನು ಏರ್ಪಡಿಸಲಾಗಿತ್ತು. ಈ ಚರ್ಚಾಕೂಟಕ್ಕೆ ಹಾಜರಾದ ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಹಾಗೂ ರೈತ ಸೇನಾ ಕರ್ನಾಟಕ, ರಾಜ್ಯ ಸಮಿತಿ ಸದಸ್ಯರಾದ ಮಲ್ಲಿಕಾರ್ಜುನ ಅಲೇಕರ, ಹೈಕೋರ್ಟ್ ನ್ಯಾಯವಾದಿ ಬಿ ಡಿ ಹಿರೇಮಠ, ಮುತ್ತು ಬೆಳ್ಳಕ್ಕಿ ಸೇರಿದಂತೆ ಇತರರು ಭಾಗವಹಿಸಿದ್ದರು.
ಕಳೆದ ಒಂಬತ್ತು ದಿನಗಳ ಕಾಲ ಸತತವಾಗಿ ಧರಣಿ ನಿರತ ಮುಖಂಡರುಗಳ ಸಮ್ಮುಖದಲ್ಲಿ ಚರ್ಚಿಸಿ ಕರ್ನಾಟಕ ನೀರಾವರಿ ನಿಗಮ ಧಾರವಾಡಲ್ಲಿ ಉಳಿಸುವುದಾಗಿ ನಿರ್ಧಾರ ತೆಗೆದುಕೊಂಡಿದ್ದು, ಸೆ. 21 ಸೋಮವಾರದಂದು ಹೊಸ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ. ಅಲ್ಲಿಯವರೆಗೂ ನಿರಂತರ ಧರಣಿ ಮುಂದುವರಿಯಲಿದೆ ಎಂದು ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ತಿಳಿಸಿದ್ದಾರೆ.
Kshetra Samachara
20/09/2020 09:24 am