ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಲೈಂಗಿಕ ದೌರ್ಜನ್ಯ: ಕಠಿಣ ಕಾನೂನು ಜಾರಿಗೊಳಿಸಿ

ಧಾರವಾಡ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಕಾನೂನನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ರಾಮ ಸೇನಾ ಕಾರ್ಯಕರ್ತರು ಧಾರವಾಡದ ಅಂಬೇಡ್ಕರ್ ಪುತ್ಥಳಿ ಎದುರು ಪ್ರತಿಭಟನೆ ನಡೆಸಿದರು.

2016 ರಿಂದ 2018 ರ ರವರೆಗೆ ಭಾರತದಲ್ಲಿ ಒಟ್ಟು 84,374 ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆದಿವೆ. ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಲಕ್ಷಗಟ್ಟಲೇ ದಂಡ ಹಾಕಿ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕು ಹಾಗೂ ಆರೋಪಿಗಳನ್ನು ನಡು ರಸ್ತೆಯಲ್ಲಿ ಗಲ್ಲಿಗೇರಿಸುವಂತಹ ಕಾನೂನನ್ನು ಜಾರಿಗೆ ತರಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

Edited By :
Kshetra Samachara

Kshetra Samachara

06/10/2020 03:21 pm

Cinque Terre

15.67 K

Cinque Terre

2

ಸಂಬಂಧಿತ ಸುದ್ದಿ