ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪಠ್ಯದಲ್ಲಿ ಬಸವಣ್ಣನವರ ಇತಿಹಾಸ ತಿರುಚಿದ ಸರ್ಕಾರ; ಲಿಂಗಾಯತ ಧರ್ಮದ ಮುಖಂಡರ ಪ್ರತಿಭಟನೆ

9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯು ಲಿಂಗಾಯತ ಧರ್ಮಗುರು ಬಸವಣ್ಣನವರ ಕುರಿತು ಪಾಠದಲ್ಲಿ ಪರಿಷ್ಕರಣೆ ಮಾಡಿ ತಿರುಚಿದ ಸುಳ್ಳು ಇತಿಹಾಸವನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮುಮ್ಮಿಗಟ್ಟಿಯ ಡಾ.ಬಸವಾನಂದ ಸ್ವಾಮೀಜಿ ನೇತೃತ್ವದಲ್ಲಿ ಲಿಂಗಾಯತ ಧರ್ಮದ ಮುಖಂಡರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಬಸವಣ್ಣನವರು ಉಪನಯನವಾದ ನಂತರ ಕೂಡಲ ಸಂಗಮಕ್ಕೆ ತೆರಳಿದರು ಎಂದು ಪಠ್ಯದಲ್ಲಿ ಉಲ್ಲೇಖಿಸಲಾಗಿದೆ ಇದು ತಪ್ಪು. ಬಸವಣ್ಣನವರು ಉಪನಯನವನ್ನು ತಿರಸ್ಕರಿಸಿ ಕೂಡಲ ಸಂಗಮಕ್ಕೆ ಹೋಗಿದ್ದರು. ಅವರು ಶೈವ ಗುರುಗಳ ಸಾನಿಧ್ಯದಲ್ಲಿ ಲಿಂಗ ಧೀಕ್ಷೆ ಪಡೆದರು ಎಂದು ಉಲ್ಲೇಖಿಸಲಾಗಿದೆ. ಇದು ತಪ್ಪು. ಶೈವ ಗುರುಗಳು ಗುಡಿ-ಗುಂಡಾರಗಳಲ್ಲಿರುವ ಸ್ಥಾವರ ಲಿಂಗಾರಾಧಕರು. ಹಾಗೇ ಬಸವಣ್ಣನವರು ವೀರಶೈವ ಮತವನ್ನು ಅಭಿವೃದ್ಧಿ ಪಡಿಸಿದರು ಎಂಬುದು ತಪ್ಪು. ಬಸವಣ್ಣನವರು ಲಿಂಗಾಯತ ಧರ್ಮವನ್ನು ಸ್ಥಾಪಿಸಿದರು. ಇಂತಹ ಹಲವಾರು ಸಂಗತಿಗಳನ್ನು ತಿರುಚಲಾಗಿದೆ ಎಂದು ಸರ್ಕಾರದ ವಿರುದ್ಧ ಡಾ.ಬಸವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.

ವೀರಶೈವ ಎನ್ನುವುದು 14ನೇ ಶತಮಾನದಿಂದ ಈಚೆಗೆ ಬಳಕೆಗೆ ಬಂದ ಪದ. ಈ ಸತ್ಯವನ್ನು ಅರಿಯದ ಪಠ್ಯ ರಚನೆಕಾರರು ಬಸವಣ್ಣನವರ ಆಶಯಕ್ಕೆ ಅಪಚಾರವೆಸಗಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಮನದಲ್ಲಿ ತಪ್ಪು ಅಭಿಪ್ರಾಯಗಳ ಬೀಜ ಬಿತ್ತಿದಂತಾಗುತ್ತದೆ. ಆದ್ದರಿಂದ ಸರ್ಕಾರ ಕೂಡಲೇ ಈ ತಪ್ಪುಗಳನ್ನು ಸರಿಪಡಿಸಬೇಕು ಇಲ್ಲದೇ ಹೋದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಲಿಂಗಾಯತ ಮುಖಂಡರು ಎಚ್ಚರಿಸಿದರು.

Edited By :
Kshetra Samachara

Kshetra Samachara

04/06/2022 12:36 pm

Cinque Terre

15.74 K

Cinque Terre

3

ಸಂಬಂಧಿತ ಸುದ್ದಿ