ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಷ್ಟ್ರೀಯ ಶಿಕ್ಷಣ ನೀತಿ: ಧಾರವಾಡದಲ್ಲಿ ಸಂವಾದ ನಡೆಸಿದ ಸಚಿವ ಅಶ್ವತ್ಥನಾರಾಯಣ

ಧಾರವಾಡ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶನಿವಾರ ಧಾರವಾಡದ ಸಾಹಿತ್ಯ ವಲಯದ ಪ್ರಮುಖರ ಜತೆ ಮಹತ್ವದ ಸಂವಾದ ನಡೆಸಿದರು.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸೆನೆಟ್ ಸಭಾಂಗಣದಲ್ಲಿ ಸಭೆ ನಡೆಸಿದ ಅವರು, ಶಿಕ್ಷಣ ನೀತಿಯಲ್ಲಿ ಅಡಕವಾಗಿರುವ ಅಂಶಗಳ ಬಗ್ಗೆ ಸಾಹಿತಿಗಳಿಗೆ ವಿವರಿಸಿದರು. ಅವರಲ್ಲಿದ್ದ ಸಂಶಯಗಳನ್ನು ನಿವಾರಿಸಿದರು. ಅಲ್ಲದೇ ಶಿಕ್ಷಣ ನೀತಿಯಲ್ಲಿರುವ ಕ್ರಾಂತಿಕಾರಕ ಅಂಶಗಳ ಬಗ್ಗೆ ಇದೇ ವೇಳೆ ಸಾಹಿತಿಗಳು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೇ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ವರ್ಷದಿಂದಲೇ ಜಾರಿ ಆಗುತ್ತಿರುವ ಈ ನೀತಿಯಲ್ಲಿ ಮಾತೃಭಾಷಾ ಕಲಿಕೆಗೆ ಇರುವ ಮಹತ್ವವನ್ನು ಸಾಹಿತಿಗಳಿಗೆ ಮನವರಿಕೆ ಮಾಡಿಕೊಟ್ಟ ಸಚಿವರು, ಬಹು ಆಯ್ಕೆಯ ಕಲಿಕೆಯಿಂದ ಆಗುವ ಬದಲಾವಣೆಗಳ ಬಗ್ಗೆಯೂ ವಿವರವಾಗಿ ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಶೈಕ್ಷಣಿಕ ವ್ಯವಸ್ಥೆ ಉನ್ನತೀಕರಿಸುವ ಹಾಗೂ ವಿದ್ಯಾರ್ಥಿಗಳ ಹಿತವನ್ನು ಎತ್ತಿಹಿಡಿಯುವ ಧ್ಯೇಯವೊಂದನ್ನು ಹೊರತುಪಡಿಸಿ ಬೇರಾವ ಅಜೆಂಡಾ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿದ ಸಚಿವರು, ಸಂವಾದದಲ್ಲಿ ಪಾಲ್ಗೊಂಡಿದ್ದ ಪ್ರತಿ ಸಾಹಿತಿ ಅಭಿಪ್ರಾಯವನ್ನು ಆಲಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರತಿ ವಿದ್ಯಾರ್ಥಿ ಒಂದಲ್ಲ ಎರಡು ವರ್ಷ ತನ್ನ ಮಾತೃಭಾಷೆಯಲ್ಲಿ ಕಡ್ಡಾಯವಾಗಿ ಕಲಿಯಬೇಕು. ಈ ಮೂಲಕ ಮಾತೃಭಾಷಾ ಕಲಿಕೆಗೆ ಅತ್ಯುನ್ನತ ಮಹತ್ವ ಕೊಡಲಾಗುತ್ತದೆ. ಇಷ್ಟೇ ಅಲ್ಲದೇ ಕನ್ನಡ ಭಾಷೆಯಲ್ಲೇ ತಾಂತ್ರಿಕ ಶಿಕ್ಷಣ ನೀಡುತ್ತಿದ್ದೇವೆ. ಇದರಲ್ಲಿ ಕಲಿತವರಿಗೆ ಉದ್ಯೋಗ ಮತ್ತು ಉನ್ನತ ಶಿಕ್ಷಣ ನೀಡುವಲ್ಲಿ ರಿಯಾಯಿತಿ ಇಲ್ಲವೇ ಮೀಸಲು ಕೊಡಲಾಗುವುದು ಎಂದು ಸಚಿವರು ಹೇಳಿದರು.

ಸ್ಥಳೀಯ ಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ಕೊಡಬೇಕಾದರೆ ಬಂಡವಾಳ ಹೆಚ್ಚು ಹೂಡಬೇಕು. ಇದಕ್ಕೆ ತಂತ್ರಜ್ಞಾನದ ನೆರವು ಬೇಕು. ಕೋಡಿಂಗ್ ಮತ್ತಿತರರ ಕೆಲಸ ಆಗಬೇಕಾಗುತ್ತದೆ. ಇದಕ್ಕೂ ಅವಕಾಶ ಕಲ್ಪಿಸುವ ವ್ಯವಸ್ಥೆ ಆಗಲಿದೆ ಎಂದರು.

ಸಂವಾದದಲ್ಲಿ ಮಾತನಾಡಿದ ಲೇಖಕಿ ಮಾಲತಿ ಪಟ್ಟಣಶೆಟ್ಟಿ ಅವರು, ಶಿಕ್ಷಣ ನೀತಿ ಕನಿಷ್ಠ ಹತ್ತು ವರ್ಷಕ್ಕಾದರೂ ಬದಲಾಗಬೇಕು. 35 ವರ್ಷದವರೆಗೂ ನೀತಿ ಬದಲಾಗಿಲ್ಲ‌ ಎನ್ನುವ ಊಹೆ ಮಾಡಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಆಗಾಗ್ಗೆ ಆಗಬೇಕು ಎಂದರು.

Edited By : Vijay Kumar
Kshetra Samachara

Kshetra Samachara

21/08/2021 06:55 pm

Cinque Terre

26.92 K

Cinque Terre

1

ಸಂಬಂಧಿತ ಸುದ್ದಿ