ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಹಂಗಾಮಿ ಕಾರ್ಮಿಕರನ್ನು ಕ್ಷೇಮಾಭಿವೃದ್ಧಿ ಕಾಯ್ದೆಯಡಿ ಖಾಯಂ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ನೌಕರರು ಸೋಮವಾರದಿಂದ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಕಾರ್ಮಿಕರು ಹಂಗಾಮಿ ನೌಕರರಾಗಿ ಕೆಲಸ ಮಾಡುತ್ತಿದ್ದು, ಅವರನ್ನು ಖಾಯಂ ಮಾಡಿಕೊಳ್ಳಬೇಕು ಹಾಗೂ ಕೃಷಿ ವಿಶ್ವವಿದ್ಯಾಲಯದಲ್ಲಿ ಕಾರ್ಮಿಕ ಸಮಿತಿ ರಚನೆ ಮಾಡಬೇಕು ಎಂಬುದು ಕಾರ್ಮಿಕರ ಒತ್ತಾಯವಾಗಿದೆ.
Kshetra Samachara
16/05/2022 02:07 pm