ಧಾರವಾಡ: ಪಿಎಸ್ಐ ಮರು ಪರೀಕ್ಷೆ ನಡೆಸಬೇಕು ಎಂದು ಪಿಎಸ್ಐ ಪರೀಕ್ಷೆ ಬರೆದ ಅಭ್ಯರ್ಥಿಗಳು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಮನವಿ ನೀಡಲು ಬಂದ ವೇಳೆ ಕುಮಾರಸ್ವಾಮಿ ಅವರು 56 ಸಾವಿರ ಪಿಎಸ್ಐ ಅಭ್ಯರ್ಥಿಗಳಿಗೆ ಅನ್ಯಾಯ ಆಗಿಲ್ಲ. ಕೇವಲ 545 ಜನ ಅಭ್ಯರ್ಥಿಗಳಿಗೆ ಮಾತ್ರ ಅನ್ಯಾಯವಾಗಿದೆ ಎಂದು ಹೇಳಿಕೆ ನೀಡಿದ್ರು. ಇದ್ರಿಂದ ಸಿಟ್ಟಿಗೆದ್ದ ಪಿಎಸ್ಐ ಅಭ್ಯರ್ಥಿಗಳು ಸ್ಥಳದಲ್ಲೇ ಕುಮಾರಸ್ವಾಮಿ ಅವರಿಗೆ ಘೇರಾವ್ ಹಾಕಿ ಅವರ ವಿರುದ್ಧ ಧಿಕ್ಕಾರ ಕೂಗಿದ ಪ್ರಸಂಗ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ಅತಿಥಿ ಉಪನ್ಯಾಸಕರ ಪ್ರತಿಭಟನೆಗೆ ಬೆಂಬಲ ನೀಡಲು ಅವರು ಬಂದ ವೇಳೆ ಪಿಎಸ್ಐ ಅಭ್ಯರ್ಥಿಗಳು ಸಹ ಕುಮಾರಸ್ವಾಮಿ ಅವರಿಗೆ ಮನವಿ ನೀಡಲು ಮುಂದಾದರು. ಆಗ ಕುಮಾರಸ್ವಾಮಿ, ಈ ಹೇಳಿಕೆ ನೀಡಿದ್ದೇ ಗೊಂದಲಕ್ಕೆ ಕಾರಣವಾಯ್ತು. ಕುಲಪತಿ ಕಚೇರಿ ಎದುರೇ ಹೈಡ್ರಾಮಾ ಸೃಷ್ಠಿಸಿ, ಕೂಡಲೇ ಕುಮಾರಸ್ವಾಮಿ ಅವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
Kshetra Samachara
04/06/2022 02:09 pm