ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಗೆಹರಿಯದ ಅತಿಥಿ ಉಪನ್ಯಾಸಕರ ಸಮಸ್ಯೆಗಳು

ಧಾರವಾಡ: ವೇತನ ಹೆಚ್ಚಳ ಮಾಡುವುದು, ಸೇವಾ ಭದ್ರತೆ ನೀಡುವುದು ಹಾಗೂ ಪದನಾಮ ಬದಲಾವಣೆ ಮಾಡುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಅತಿಥಿ ಉಪನ್ಯಾಸಕರು ಆಗಾಗ ಪ್ರತಿಭಟನೆ ನಡೆಸುತ್ತ ಬಂದಿದ್ದರೂ ಅವರ ಬೇಡಿಕೆಗಳು ಮಾತ್ರ ಇನ್ನೂ ಬಗೆಹರಿದಿಲ್ಲ.

ಕರ್ನಾಟಕ ವಿಶ್ವವಿದ್ಯಾಲಯದ ಈ ಧೋರಣೆ ಖಂಡಿಸಿ ಕಳೆದ ಆರು ದಿನಗಳಿಂದ ಉಪನ್ಯಾಸಕರು ಕವಿವಿ ಆಡಳಿತ ಕಚೇರಿ ಮುಂದೆ ಧರಣಿ ನಡೆಸುತ್ತಿದ್ದಾರೆ. ಬುಧವಾರ ಉಪನ್ಯಾಸಕರ ಧರಣಿ ನಿರತ ಸ್ಥಳಕ್ಕೆ ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಕೂಡ ಭೇಟಿ ನೀಡಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದರು. ಅಲ್ಲದೇ ಉಪನ್ಯಾಸಕರ ಬೇಡಿಕೆ ಈಡೇರಿಕೆಗಾಗಿ ಡಿಸಿ ಕಚೇರಿವರೆಗೂ ಪಾದಯಾತ್ರೆ ಮಾಡಲಾಗುವುದು ಎಂದರು.

ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸದೇ ಕುಲಪತಿಗಳು ಕುಂಟು ನೆಪ ಹೇಳುತ್ತಿದ್ದಾರೆ. ಇವರ ಸಮಸ್ಯೆಗಳಿಗೆ ಸ್ಪಂದಿಸಿದರೆ, ಸಾಮಾನ್ಯ ಕುಟುಂಬಗಳಿಗೆ ಸಹಾಯ ಮಾಡಿದ ಪುಣ್ಯ ವಿಸಿಯವರಿಗೆ ಬರುತ್ತದೆ. ಸರ್ಕಾರದ ಕಣ್ಣು ತೆರೆಯುವವರೆಗೂ ಉಪನ್ಯಾಸಕರ ಹೋರಾಟಕ್ಕೆ ನಾನು ಬೆಂಬಲ ನೀಡುತ್ತೇನೆ ಎಂದು ಚಿಂಚೋರೆ ಹೇಳಿದರು.

Edited By :
Kshetra Samachara

Kshetra Samachara

17/08/2022 03:44 pm

Cinque Terre

24.82 K

Cinque Terre

0

ಸಂಬಂಧಿತ ಸುದ್ದಿ