ನವಲಗುಂದ: ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಮರು ನಿರ್ಮಾಣಕ್ಕೆ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಭೂಮಿ ಪೂಜೆ ನೆರವೇರಿಸಿದರು.
ಲೋಕೋಪಯೋಗಿ ಇಲಾಖೆಯ ಅನುದಾನದ ಅಡಿಯಲ್ಲಿ ಅಂದಾಜು 1.8 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಸ್ಮಾರ್ಟ್ ಕ್ಲಾಸ್ ನ ಉದ್ಘಾಟನೆ ಮಾಡಲಾಯಿತು. ಈ ವೇಳೆ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ, ಶಾಲಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಸೇರಿದಂತೆ ಗ್ರಾಮಸ್ತರು ಉಪಸ್ಥಿತರಿದ್ದರು.
Kshetra Samachara
09/02/2021 08:23 pm