ಧಾರವಾಡ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ವಿಶ್ವವಿದ್ಯಾಲಯದ ವಿವಿಧ ವಿಭಾಗದ ಶಿಕ್ಷಕರು ತರಗತಿಗಳನ್ನು ಬಹಿಷ್ಕರಿಸಿ ಆಡಳಿತ ಮಂಡಳಿ ಎದುರು ಪ್ರತಿಭಟನೆ ನಡೆಸಿದರು.
ಹಲವಾರು ತಿಂಗಳಿನಿಂದ ಬಾಕಿ ಇರಿಸಿಕೊಂಡಿರುವ ಶಿಕ್ಷಕರ ವೇತನವನ್ನು ಬಿಡುಗಡೆ ಮಾಡಬೇಕು, ಬಡ್ತಿ ವಿಚಾರದಲ್ಲಿ ತಾರತಮ್ಯ ಮಾಡಬಾರದು ಎಂಬ ಇತ್ಯಾದಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಶಿಕ್ಷಕರು ಆಗ್ರಹಿಸಿದರು.
ಹಲವಾರು ತಿಂಗಳಿನಿಂದ ವೇತನ ಇಲ್ಲದೇ ಪರದಾಡುವಂತಾಗಿದೆ. ಕೂಡಲೇ ಆಡಳಿತ ಮಂಡಳಿಯು ಬಾಕಿ ಇರಿಸಿಕೊಂಡಿರುವ ವೇತನವನ್ನು ಬಿಡುಗಡೆ ಮಾಡಬೇಕು. ಇಲ್ಲದೇ ಹೋದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಶಿಕ್ಷಕರು ಎಚ್ಚರಿಸಿದರು.
Kshetra Samachara
18/10/2021 06:26 pm