ಧಾರವಾಡ: ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸಿ

ಧಾರವಾಡ: ರಾಜ್ಯದಲ್ಲಿರುವ ಶೈಕ್ಷಣಿಕ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೊರೊನಾ ವೈರಸ್ ಅಟ್ಟಹಾಸದ ನಂತರ ಇದೀಗ ಶಾಲಾ, ಕಾಲೇಜುಗಳು ಆರಂಭವಾಗುತ್ತಿರುವುದು ಸಂತೋಷದ ಸಂಗತಿ. ಆದರೆ, ಅನೇಕ ಕಡೆ ಶೈಕ್ಷಣಿಕ ಸಮಸ್ಯೆಗಳು ಕಂಡುಬರುತ್ತಿವೆ. ಅನೇಕ ಹಳ್ಳಿಗಳಿಗೆ ಬಸ್ಸಿನ ಸೌಲಭ್ಯ, ವಿದ್ಯಾರ್ಥಿವೇತನ, ಹಾಸ್ಟೆಲ್ ಸೌಲಭ್ಯ ಸೇರಿದಂತೆ ಅನೇಕ ಸಮಸ್ಯೆಗಳು ಎದುರಾಗುತ್ತಿವೆ ಈ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರ ಎಚ್ಚೆತ್ತು ಶೈಕ್ಷಣಿಕ ಸಮಸ್ಯೆಗಳನ್ನು ನಿವಾರಣೆ ಮಾಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿ, ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Kshetra Samachara

Kshetra Samachara

1 month ago

Cinque Terre

17.25 K

Cinque Terre

0