ಹುಬ್ಬಳ್ಳಿ: ಶಾಲೆ ಹಾಗೂ ಅಂಗನವಾಡಿಗಳಲ್ಲಿ ಮಕ್ಕಳ ಪೌಷ್ಟಿಕಾಂಶ ನೀಡುವ ಹಿನ್ನಲೆಯಲ್ಲಿ ಮೊಟ್ಟೆ ವಿತರಣೆ ಮಾಡುತ್ತಿರುವುದು ಖಂಡನೀಯವಾಗಿದೆ. ಅಲ್ಲದೆ ಸಸ್ಯಹಾರಿ ಮಕ್ಕಳಿಗಾಗಿ ಪ್ರತ್ಯೇಕ ಶಾಲೆ ಹಾಗೂ ಅಂಗನವಾಡಿ ತೆರೆಯಬೇಕು ಎಂದು ಆಗ್ರಹಿಸಿ ಇದೇ 20ರಂದು ಸಂತ ಸಮಾವೇಶ ಮತ್ತು ವಿಧಾನಸೌಧ ಚಲೋ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ದಯಾನಂದ ಸ್ವಾಮೀಜಿ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸರ್ಕಾರ ಮಕ್ಕಳಿಗೆ ಪೋಷಕಾಂಶಗಳನ್ನು ಒದಗಿಸುವ ನಿಟ್ಟಿನಲ್ಲಿ ಸಸ್ಯಹಾರಿ ಸಮುದಾಯವನ್ನು ಶಾಖಾಹಾರಿ ಹಾಗೂ ಮಾಂಸಹಾರಿಗಳನ್ನಾಗಿ ಪರಿವರ್ತನೆ ಮಾಡುತ್ತಿದೆ. ಸರ್ಕಾರ ಇದನ್ನು ಕೈ ಬಿಟ್ಟು ಮೊಟ್ಟೆ ಬದಲು ಸಸ್ಯಹಾರಿ ಆಹಾರದಲ್ಲಿ ಪೋಷಕಾಂಶಗಳನ್ನು ನೀಡುವ ಕೆಲಸ ಮಾಡಬೇಕು. ಇಲ್ಲವಾದರೆ ಸಸ್ಯಹಾರಿ ಮಕ್ಕಳಿಗಾಗಿ ಪ್ರತ್ಯೇಕ ಶಾಲೆ ಹಾಗೂ ಅಂಗನವಾಡಿ ತೆರೆಯಬೇಕು ಎಂದು ಆಗ್ರಹಿಸಿದರು.
Kshetra Samachara
08/12/2021 02:09 pm