ಧಾರವಾಡ: ಪಿಎಸ್ಐ ಪರೀಕ್ಷೆಯಲ್ಲಿ ನಡೆದ ಅಕ್ರಮದಲ್ಲಿ ಸಿಎಂ ಕಚೇರಿ ಕೂಡ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದ್ದು, ಸರ್ಕಾರದ ಅದನ್ನು ಪ್ರಾಮಾಣಿಕವಾಗಿ ತನಿಖೆ ಮಾಡಲು ಬಿಡುತ್ತಿಲ್ಲ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್ ನೀರಕೇರಿ ಗಂಭೀರ ಆರೋಪ ಮಾಡಿದ್ದಾರೆ.
ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಐಡಿ ಈ ಪ್ರಕರಣವನ್ನು ಪ್ರಾಮಾಣಿಕವಾಗಿ ತನಿಖೆ ಮಾಡುತ್ತಿಲ್ಲ. ಸರ್ಕಾರ ಕೂಡ ಅದನ್ನು ಪ್ರಾಮಾಣಿಕವಾಗಿ ತನಿಖೆ ಮಾಡಲು ಬಿಡುತ್ತಿಲ್ಲ ಎಂದು ಆರೋಪಿಸಿದರು. ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಗೃಹ ಸಚಿವರ ಕಚೇರಿ ಕೂಡ ಭಾಗಿಯಾಗಿದೆ. ಹೀಗಾಗಿ ಏಕಾಏಕಿ ಪರೀಕ್ಷೆಯನ್ನೇ ರದ್ದುಗೊಳಿಸಿದೆ. ಸರ್ಕಾರ ಮರು ಪರೀಕ್ಷೆ ಮಾಡುವ ಬದಲಿಗೆ ನಿಜವಾದ ಆರೋಪಿಗಳನ್ನು ಬಂಧಿಸಬೇಕು. ಕೇವಲ ಪಿಎಸ್ಐ ಅಲ್ಲ ಎಫ್‌ಡಿಎ, ಶಿಕ್ಷಕರ ನೇಮಕಾತಿಯಲ್ಲೂ ಅಕ್ರಮ ನಡೆದಿದೆ. ಸರ್ಕಾರದಲ್ಲಿ ಇರುವವರೇ ಇದನ್ನು ಹೇಳುತ್ತಿದ್ದಾರೆ ಎಂದರು.
ಸರ್ಕಾರವೇ ಈ ಅಕ್ರಮ ನಡೆಸುತ್ತಿದೆ. ಗೃಹ ಸಚಿವರ ಸಹಕಾರ ಇಲ್ಲದೇ ಈ ಅಕ್ರಮ ನಡೆಯಲು ಸಾಧ್ಯವಿಲ್ಲ. ಈ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಯಬೇಕು. ಇದಕ್ಕೆ ಸಂಬಂಧಿಸಿದ ಎಡಿಜಿಪಿ, ಎಸ್‌ಪಿ, ಡಿಎಸ್‌ಪಿ ಅವರನ್ನು ಅಮಾನತ್ತು ಮಾಡಬೇಕು ಎಂದರು.
Kshetra Samachara
02/05/2022 06:45 pm