ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಶಿಕ್ಷಕರ ಹೋರಾಟಕ್ಕೆ ಬೆಂಬಲ ಸೂಚಿಸಿದ ಹೊರಟ್ಟಿ

ಧಾರವಾಡ: ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಹಾಗೂ ವಿವಿಧ ಶಿಕ್ಷಕ, ನೌಕರರ ಸಂಘಟನೆಗಳ ನೇತೃತ್ವದಲ್ಲಿ ಪಿಂಚಣಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡದ ಮಿನಿ ವಿಧಾನಸೌಧ ಆವರಣದಲ್ಲಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಈ ವೇಳೆ ಮಾತನಾಡಿದ ಅವರು, ಸರ್ಕಾರಿ ಶಾಲಾ ಕಾಲೇಜುಗಳ ನೌಕರರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳು ಅನುದಾನಿತ ನೌಕರರಿಗೂ ಸಿಗಬೇಕಾದದ್ದು ಅತ್ಯಂತ ಅನಿವಾರ್ಯ ಮತ್ತು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿ, ಸೂಕ್ತ ನಿರ್ಣಯ ತೆಗೆದುಕೊಳ್ಳುವುದಾಗಿ ಸಿಎಂ ಹೇಳಿದ್ದಾರೆ ಎಂದರು.

ಅದಲ್ಲದೇ ಅನುದಾನಿತ ನೌಕರರಿಗೆ ಯಾವ ಪಿಂಚಣಿ ವ್ಯವಸ್ಥೆಯೂ ಇಲ್ಲವಾದ್ದರಿಂದ ನೂತನ ಪಿಂಚಣಿ ವ್ಯವಸ್ಥೆಯನ್ನಾದರೂ ಜಾರಿ ತರಬೇಕು ಎಂದು ಸಾವಿರಾರು ನೌಕರರು ಬೇಡಿಕೆ ಇಡುತ್ತಿದ್ದಾರೆ. ಆದರೆ ಇದು ನಮ್ಮ ರಾಜ್ಯಕ್ಕಷ್ಟೇ ಸೀಮಿತವಾದ ಯೋಜನೆಯಲ್ಲ ಇಡೀ ರಾಷ್ಟ್ರವ್ಯಾಪಿ ನೌಕರರಿಗೆ ಈ ವ್ಯವಸ್ಥೆ ಇದೆ. ಹೀಗಾಗಿ ಈಗಾಗಲೇ ದೇಶದ ಲಕ್ಷಾಂತರ ನೌಕರರು ಹಳೇ ನಿಶ್ಚಿತ ಪಿಂಚಣಿಯನ್ನೇ ನೀಡಬೇಕೆಂದು ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಇದರ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದರು.

ಒಂದು ವೇಳೆ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಪಿಂಚಣಿ ಬೇಡಿಕೆ ಈಡೇರದೇ ಹೋದರೆ ನೌಕರರು ನಡೆಸುವ ಎಲ್ಲ ರೀತಿಯ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದರು.

Edited By : Shivu K
Kshetra Samachara

Kshetra Samachara

13/05/2022 01:50 pm

Cinque Terre

29.58 K

Cinque Terre

7

ಸಂಬಂಧಿತ ಸುದ್ದಿ