ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಜಿಲ್ಲೆಯ 3 ಐಟಿಐಗಳ ಉನ್ನತೀಕರಣ:ಪ್ರತಿ ಐಟಿಐಗೆ 30 ಕೋಟಿ ಅನುದಾನ:ಸಿಎಂ ಜಗದೀಶ ಶೆಟ್ಟರ್

ಹುಬ್ಬಳ್ಳಿ: ರಾಜ್ಯ ಸರ್ಕಾರದ 690 ಕೋಟಿ, ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಮತ್ತು‌ ಇತರೆ 20 ಉದ್ಯಮ ಪಾಲುದಾರರ 4,060 ಕೋಟಿ ವೆಚ್ಚದಲ್ಲಿ ರಾಜ್ಯದ 150 ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರಗಳನ್ನು ತಾಂತ್ರಿಕ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಜಲ್ಲೆಯ 3 ಐಟಿಐ ಕೇಂದ್ರಗಳನ್ನು ಉನ್ನತೀಕರಿಸಲಾಗುತ್ತಿದೆ. ಪ್ರತಿಯೊಂದು ಐಟಿಐಗೆ 30 ಕೋಟಿ ರೂ.ದೊರೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.

ವಿದ್ಯಾನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಉದ್ಯೋಗ ಯೋಜನೆಯಡಿ ಜಾಗತಿಕ ಕೈಗಾರಿಕೆ ಹಾಗೂ ಅಸೆಂಬ್ಲಿ ಲೈನುಗಳಲ್ಲಿ ಉದ್ಯೋಗಾವಕಾಶಗಳಿಗಾಗಿ ಯುವ ಜನತೆಗೆ ಅತ್ಯಾಧುನಿಕ ತಂತ್ರಜ್ಞಾನಗಳ ತರಬೇತಿ ಹಾಗೂ ತಾಂತ್ರಿಕ ಕೇಂದ್ರಗಳನ್ನಾಗಿ ಉನ್ನತೀಕರಿಸಲಾಗಿರುವ 150 ಐಟಿಐಗಳನ್ನು ವರ್ಚುವಲ್ ಆಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸುವ ಕಾರ್ಯಕ್ರಮದ ನಂತರ ಅವರು ಮಾತನಾಡಿದರು.

ಕೈಗಾರಿಕಾ ತರಬೇತಿಗೆ ಬಹಳ ಮಹತ್ವವಿದೆ. ತಾಂತ್ರಿಕ ಶಿಕ್ಷಣ ಪಡೆಯುವುದರಿಂದ ಯುವಕರಿಗೆ ಉದ್ಯೋಗಾವಕಾಶಗಳು ಸಿಗಲಿವೆ. ಐಟಿಐ ಟ್ರೇಡ್ ಗಳು ಹೆಚ್ಚಳವಾಗಲಿವೆ ಎಂದು ತಿಳಿಸಿದರು.

Edited By :
Kshetra Samachara

Kshetra Samachara

20/06/2022 07:38 pm

Cinque Terre

8.53 K

Cinque Terre

1

ಸಂಬಂಧಿತ ಸುದ್ದಿ