ಧಾರವಾಡ: ಧಾರವಾಡದ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ಎಬಿವಿಪಿ ಸಂಘಟನೆ ನೇತೃತ್ವದಲ್ಲಿ ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಧಾರವಾಡದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಇತ್ತೀಚ್ಚಿಗೆ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆಯುತ್ತಲೇ ಇವೆ. ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಜರುಗಿಸಬೇಕು. ಸದ್ಯ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು.
Kshetra Samachara
19/08/2022 12:58 pm