ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯನವರ ಅಲ್ಬಮ್ ಸಾಂಗ್ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ರಾಜಕೀಯ ಜೀವನವನ್ನು ಹಾಗೂ ಆದರ್ಶಪ್ರಾಯವಾದ ಅಭಿವೃದ್ಧಿ ಕಾರ್ಯಗಳನ್ನು ಜನಕ್ಕೆ ತಲುಪಿಸುವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸಿದ್ಧರಾಮಯ್ಯನವರ ರಾಜಕೀಯ ಜೀವನದ ಅಲ್ಬಮ್ ಸಾಂಗ್ ಬಿಡುಗಡೆ ಹಾಗೂ ಕರ್ನಾಟಕ ರಾಜ್ಯ ಸಿದ್ಧರಾಮಯ್ಯನವರ ಅಭಿಮಾನಿ ಬಳಗದ ಲೋಕಾರ್ಪಣೆ ಮಾಡಲಾಯಿತು.

ಹುಬ್ಬಳ್ಳಿಯ ವಿದ್ಯಾನಗರದ ಹನ್ಸ್ ಹೋಟೆಲ್‌ನಲ್ಲಿ ಅಲ್ಬಮ್ ಸಾಂಗ್ ಹಾಗೂ ಕರ್ನಾಟಕ ರಾಜ್ಯ ಸಿದ್ಧರಾಮಯ್ಯನವರ ಅಭಿಮಾನಿ ಬಳಗದ ಉದ್ಘಾಟನೆಯನ್ನು ಮಾಜಿ ಸಚಿವ ಸಂತೋಷ ಲಾಡ್ ನೆರವೇರಿಸಿದರು. ಕಾರ್ಯಕ್ರಮಕ್ಕೆ ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಯವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು. ಕಾಂಗ್ರೆಸ್ ಮುಖಂಡರಾದ ಗಿರೀಶ್ ಗದಿಗೆಪ್ಪಗೌಡರ ನೇತೃತ್ವದಲ್ಲಿ ಕಾರ್ಯಕ್ಕೆ ಮುನ್ನುಡಿ ಬರೆಯಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ, ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಅನ್ವರ್ ಮುಧೋಳ, ಪಾಲಿಕೆ ಮಾಜಿ ಸದಸ್ಯರಾದ ಪ್ರಪುಲಚಂದ್ರ ರಾಯನಗೌಡರ, ರೈತ ಸಂಘದ ಉಪಾಧ್ಯಕ್ಷರಾದ ಡಿ.ಟಿ.ಪಾಟೀಲ, ಪಾಲಿಕೆ ಸದಸ್ಯರಾದ ನಿರಂಜನಯ್ಯ ಹಿರೇಮಠ, ಪಾಲಿಕೆ ಸದಸ್ಯರಾದ ಶಂಕರ ಹೊಸಮನಿ, ಪ್ರಕಾಶ ಕುರಹಟ್ಟಿ ಸೇರಿದಂತೆ ಇತರರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಯಾಗಿತು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

01/08/2022 01:01 pm

Cinque Terre

88.75 K

Cinque Terre

11

ಸಂಬಂಧಿತ ಸುದ್ದಿ