ಧಾರವಾಡ: ಪ್ರಸಕ್ತ ವರ್ಷದಲ್ಲಿ ಧಾರವಾಡ ಜಿಲ್ಲೆಯಲ್ಲಿ ಜುಲೈ ಮತ್ತು ನವೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ವಿವಿಧ ಕೃಷಿ, ತೋಟಗಾರಿಕೆ ಬೆಳೆಗಳ ಹಾನಿಯ ವಿವರವನ್ನು ಪರಿಹಾರ ತಂತ್ರಾಂಶದಲ್ಲಿ ದಿನಂಪ್ರತಿ ದಾಖಲಿಸಲಾಗಿದ್ದು, 121135 ರೈತರಿಗೆ ಸರ್ಕಾರದಿಂದ 96,33 ಕೋಟಿ ರೂಪಾಯಿ ಪರಿಹಾರ ಮೊತ್ತವನ್ನು ನೇರವಾಗಿ ರೈತರ ಖಾತೆಗೆ ಜನೇವರಿ 17, 2022 ರವರೆಗೆ ಬೆಳೆ ಪರಿಹಾರಧನ ಜಮೆ ಮಾಡಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಈಗ ಸದ್ಯ ಸರ್ಕಾರವು ಘೋಷಿಸಿರುವಂತೆ ಬೆಳೆ ಹಾನಿಯಾದ ರೈತರಿಗೆ ಹೆಚ್ಚುವರಿಯಾಗಿ ಪರಿಹಾರ ಮೊತ್ತ 96.11 ಕೋಟಿ ರೂಪಾಯಿಯನ್ನು ಡಿಸೆಂಬರ್ 09, 2022 ರಂದು ಆರ್.ಟಿ.ಜಿ.ಎಸ್. ಮೂಲಕ ನೇರವಾಗಿ ರೈತರ ಉಳಿತಾಯ ಖಾತೆಗೆ ಜಮಾ ಮಾಡಲಾಗಿದೆ.
ಜಿಲ್ಲೆಯ ರೈತರಿಗೆ ಇಲ್ಲಿಯವರೆಗೆ ಒಟ್ಟು ಮೊತ್ತ 192.43 ಕೋಟಿ ರೂಪಾಯಿ ಜಮಾ ಮಾಡಲಾಗಿದೆ ಹಾಗೂ ರೈತರ ಬೆಳೆ ಹಾನಿ ಪರಿಹಾರ ಕಾರ್ಯ ಪ್ರಗತಿ ಹಂತದಲ್ಲಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
09/02/2022 09:47 pm