ಧಾರವಾಡ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯತ ಚುನಾವಣೆಗೆ ನಾಮಪತ್ರ ಸಲ್ಲಿಸಲು (ಡಿ.11) ಕೊನೆಯ ದಿನವಾಗಿತ್ತು. ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲ್ಲೂಕುಗಳ ವಿವಿಧ ಗ್ರಾಮ ಪಂಚಾಯತಗಳಿಗೆ 1285 ಸೇರಿ ಒಟ್ಟು 3209 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿನಿತೇಶ ಪಾಟೀಲ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಕೊನೆಯ ದಿನವಾದ ನಿನ್ನೆ ದಾರವಾಡ ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳಿಗೆ 757 , ಕಲಘಟಗಿ ತಾಲೂಕಿನ ಗ್ರಾಮ ಪಂಚಯತಿಗಳಿಗೆ 456 ಮತ್ತು ಅಳ್ನಾವರ ತಾಲೂಕಿನ ಗ್ರಾಮ ಪಂಚಾಯತಗಳಿಗೆ 72 ಸೇರಿದಂತೆ ಒಟ್ಟು 1285 ನಾಮಪತ್ರಗಳು ಸಲ್ಲಿಕೆ ಆಗಿವೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯ ಮೊದಲ ಹಂತದ ಗ್ರಾಮ ಪಂಚಾಯತ ಚುನಾವಣೆಗೆ ಆಧಿಸೂಚನೆ ಹೊರಡಿಸಿದ ಡಿಸೆಂಬರ್ 7 ರಿಂದ ಕೊನೆಯ ದಿನವಾದ ಡಿಸೆಂಬರ್ 11ರ ವರೆಗೆ ಧಾರವಾಡ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ 1871, ಅಳ್ನಾವರ ತಾಲೂಕಿನ ಗ್ರಾಮ ಪಂಚಾಯತಿಗಳಿಗೆ
180 ಮತ್ತು ಕಲಘಟಗಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳಿಗೆ 1158 ಸೇರಿದಂತೆ ಒಟ್ಟು 3209 ನಾಮಪತ್ರಗಳು ಸಲ್ಲಿಕೆ ಆಗಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Kshetra Samachara
12/12/2020 03:32 pm