ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಪಂಚಮಸಾಲಿ ಸಮುದಾಯದ ಕೊಡುಗೆ ಸಾಕಷ್ಟಿದೆ. ಈ ಸಮುದಾಯವನ್ನು ನಿರ್ಲಕ್ಷ್ಯ ಮಾಡಿದರೇ ನಿಜಕ್ಕೂ ಬಹುದೊಡ್ಡ ತೊಂದರೆಯನ್ನು ರಾಜ್ಯ ಬಿಜೆಪಿ ಸರ್ಕಾರ ಅನುಭವಿಸುವುದು ಖಂಡಿತ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ನಗರದಲ್ಲಿಂದು ಪಂಚಮಸಾಲಿ ಸಮಾಜದ ಹೋರಾಟದಲ್ಲಿ ಮಾತನಾಡಿದ ಅವರು, ಈಗಾಗಲೇ ಸಾಕಷ್ಟು ಬಾರಿ ಮನವಿ ಸಲ್ಲಿಸಿ ಗಡುವು ನೀಡಿದ್ದೇವೆ ಹೀಗಿದ್ದರೂ ಸರ್ಕಾರ ಮಾತ್ರ ಸೂಕ್ತ ನಿರ್ಧಾರವನ್ನು ಕೈಗೊಂಡಿಲ್ಲ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡುವ ಸದುದ್ದೇಶದಿಂದ ಈ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ. ಇದು ಸರ್ಕಾರಕ್ಕೆ ಎಚ್ಚರಿಕೆ ಘಂಟೆಯಾಗಲಿದೆ ಎಂದರು.
ಸರ್ಕಾರ ನಿರ್ಣಾಯಕ ಮತಗಳನ್ನು ಹೊಂದಿರುವ ಪಂಚಮಸಾಲಿ ಸಮುದಾಯಕ್ಕೆ ಕೊಟ್ಟಿರುವ ಮಾತನ್ನು ತಪ್ಪಿದೆ. ಅಗಸ್ಟ ತಿಂಗಳಲ್ಲಿ ಯಾವುದೇ ರೀತಿಯಲ್ಲಿ 2ಎ ಮೀಸಲಾತಿ ನೀಡದೆ ಇದ್ದರೇ ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸುವುದು ಖಂಡಿತ ಎಂದು ಅವರು ಎಚ್ಚರಿಕೆ ನೀಡಿದರು.
Kshetra Samachara
30/07/2022 12:18 pm