ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬೇಡಿಕೆಗಳನ್ನು ಈಡೇರಿಸುವಂತೆ ತಹಶೀಲ್ದಾರ ಕಚೇರಿ ಮುಂದೆ ಪ್ರತಿಭಟನೆ

ಪರಿಶಿಷ್ಟ ಸಮುದಾಯಗಳ ಮೀಸಲಾತಿಯನ್ನು ಹೆಚ್ಚಿಸುವ ನ್ಯಾ.ನಾಗಮೋಹನ್ದಾರಸ್ ಸಮಿತಿಯ ಶಿಫಾರಸ್ಸುಗಳನ್ನು ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ, ಇಂದು ನಗರದ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು. ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ವತಿಯಿಂದ ಈ ಪ್ರತಿಭಟನೆ ನಡೆದಿದೆ..

ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿಗಳು ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಬೆಂಗಳೂರಿನಲ್ಲಿ ಧರಣಿ ಕೈಗೊಂಡಿದ್ದು, ಇಂದಿಗೆ ಈ ಹೋರಾಟಕ್ಕೆ ನೂರು ದಿನಗಳಾಗಿದೆ. ಈ ನಿಟ್ಟಿನಲ್ಲಿ ಇಂದು ರಾಜ್ಯದ ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಕ್ರಿಯಾ ಸಮಿತಿ ಪ್ರತಿಭಟನೆಯನ್ನು ನಡೆಸುತ್ತಿದ್ದು ಅದರಂತೆ ಹುಬ್ಬಳ್ಳಿಯ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Edited By :
Kshetra Samachara

Kshetra Samachara

20/05/2022 04:42 pm

Cinque Terre

32.9 K

Cinque Terre

1

ಸಂಬಂಧಿತ ಸುದ್ದಿ