ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಹಾಗೂ ಧಾರವಾಡ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಸಮಿತಿಯು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಬಳಿಕ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನೆ ಮಾಡಿದರು.
ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರವಿದ್ದು, ಬಿಜೆಪಿ ಸರ್ಕಾರದಿಂದ ಜನತೆ ಬೇಸತ್ತು ಹೋಗಿದ್ದಾರೆ. ಶೀಘ್ರವೇ ದಿನನಿತ್ಯ ವಸ್ತುಗಳ ಬೆಲೆ ಏರಿಕೆ ತಡೆಯಬೇಕೆಂದು ಒತ್ತಾಯಿಸಲಾಯಿತು. ಪ್ರತಿಭಟನಾ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಪಾಲಿಕೆ ಸದಸ್ಯ ಇಮ್ರಾನ್ ಎಲಿಗಾರ, ಸ್ವಾತಿ ಮಳಗಿ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.
Kshetra Samachara
09/07/2022 01:34 pm