ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರದ 2ಎ ಹಾಗೂ ಕೇಂದ್ರ ಸರ್ಕಾರದ ಓಬಿಸಿ ಮೀಸಲಾತಿಗೆ ಒತ್ತಾಯಿಸಿ ಕುಂದಗೋಳ ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.
ಹೌದು ! ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಕೃಷಿ ಉತ್ಪನ್ನ ಮತ್ತು ರಫ್ತು ನಿಗಮದ ಮಂಡಳಿ ಅಧ್ಯಕ್ಷ ಎಸ್.ಐ.ಚಿಕ್ಕನಗೌಡರ ಸಹಯೋಗದಲ್ಲಿ ಗಾಳಿ ಮರೆಯಮ್ಮದೇವಿ ದೇವಸ್ಥಾನದಿಂದ ತಹಶೀಲ್ದಾರ ಕಚೇರಿಯವರೆಗೆ ಮೀಸಲಾತಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ದಾರಿಯುದ್ದಕ್ಕೂ ಘೋಷಣೆಗಳು ಮೊಳಗಿದವು ಬಳಿಕ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ವಿವಿಧ ಪಂಚಮಸಾಲಿ ಮುಖಂಡರ ಸಹಯೋಗದಲ್ಲಿ ಟ್ರ್ಯಾಕ್ಟರ್ ಮೂಲಕ ರಾಣಿ ಚೆನ್ನಮ್ಮ ಭಾವಚಿತ್ರ ಮೆರವಣಿಗೆ ಮೂಲಕ ನಡೆದ ಪ್ರತಿಭಟನೆಯಲ್ಲಿ ಆರ್ಕೆಸ್ಟ್ರಾ ಹಾಡುಗಳು ಪಂಚಮಸಾಲಿಗರಿಗೆ ಬಲ ತುಂಬಿದವು, ಈ ವೇಳೆ ಸಾರಿಗೆ ಬಸ್ಸನಲ್ಲಿ ಸಾಮಾನ್ಯರಂತೆ ಪ್ದಯಾಣಿಸುತ್ತಿದ್ದ ಮಾಜಿ ಸಂಸದ ಬಸ್ ಕಿಟಕಿಯಲ್ಲಿ ಕೈ ಚಾಚಿ ಪ್ರತಿಭಟನೆಗೆ ಬೆಂಬಲ ನೀಡಿದರು ಉಳಿದಂತೆ ಅನೇಕ ಮುಖಂಡರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
Kshetra Samachara
30/05/2022 05:30 pm