ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಉತ್ತರ ವಲಯದ ಉಪ ನೋಂದಣಾಧಿಕಾರಿಗಳ ಕಚೇರಿಯ ಅವ್ಯವಸ್ಥೆ ಕುರಿತು ನಿಮ್ಮ ಪಬ್ಲಿಕ್ ನೆಕ್ಸ್ಟ್ ಬಿತ್ತರಿಸಿದ ವರದಿಗೆ ಸ್ಪಂದಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಂದಾಯ ಸಚಿವ ಆರ್. ಅಶೋಕ ಅವರಿಗೆ ಪತ್ರ ಬರೆದಿದ್ದು, ಕೂಡಲೇ ಅವ್ಯವಸ್ಥೆ ಸರಿಪಡಿಸುವಂತೆ ಮನವಿ ಮಾಡಿದ್ದು, ಇದು ನಿಮ್ಮ ಪಬ್ಲಿಕ್ ನೆಕ್ಸ್ಟ್ ಮಾಧ್ಯಮದ ಬಿಗ್ ಇಂಪ್ಯಾಕ್ಟ್ ಆಗಿದೆ.
ಹೌದು.. ಉಪ ನೋಂದಣಾಧಿಕಾರಿ ಕಚೇರಿಯ ಸಿಬ್ಬಂದಿಗಳಾದ ಸೌಮ್ಯಲತಾ ಹಾಗೂ ಪ್ರತಿಭಾ ಬೀಡಿಕರ ಅವರ ಮೇಲೆ ಸಾರ್ವಜನಿಕರು ಆರೋಪ ಮಾಡಿದ್ದರು. ಈ ಬಗ್ಗೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿ ಮಾಡಿತ್ತು. ವರದಿ ಬಿತ್ತರಿಸಿದ 24 ಗಂಟೆಗಳಲ್ಲಿಯೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈ ಬಗ್ಗೆ ಕೂಡಲೇ ಸೂಕ್ತ ಕ್ರಮಗಳನ್ನು ಜರುಗಿಸುವಂತೆ ಮನವಿ ಮಾಡಿದ್ದಾರೆ.
Kshetra Samachara
19/08/2021 09:59 pm