ನವಲಗುಂದ: ನವಲಗುಂದ ತಾಲೂಕಿನ ಜಾವೂರ ಗ್ರಾಮದಲ್ಲಿ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಕುಡಿಯುವ ನೀರಿನ ಯೋಜನೆಯಾದ 'ಜಲಜೀವನ್ ಮಿಷನ್' ಯೋಜನೆಯಲ್ಲಿ ಅಂದಾಜು 157 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ಅಳವಡಿಸುವುದು ಮತ್ತು ಮನೆಗಳಿಗೆ ನಳಗಳ ಜೋಡಣೆ ಕಲ್ಪಿಸುವ ಕಾಮಗಾರಿಗೆ ಭೂಮಿಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಅನೇಕ ಮುಖಂಡರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
09/10/2021 08:24 pm