ಧಾರವಾಡ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪುರಸಭೆಯ 23 ಸದಸ್ಯ ಸ್ಥಾನಗಳಿಗೆ ಚುನಾವಣಾ ಅಧಿಸೂಚನೆಯನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಿತೇಶ್ ಪಾಟೀಲ ಅವರು ಇಂದು ಹೊರಡಿಸಿದ್ದಾರೆ.
ನಾಮಪತ್ರ ಸ್ವೀಕಾರ ಕಾರ್ಯ ಪ್ರಾರಂಭವಾಗಿದ್ದು ಡಿ.15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಡಿ.16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಡಿ.18 ಕೊನೆಯ ದಿನವಾಗಿದೆ. ಡಿ.27 ರಂದು ಮತದಾನ ನಡೆಯಲಿದೆ. ಡಿ.30 ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
Kshetra Samachara
08/12/2021 04:09 pm