ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ ಪುರಸಭೆ ಚುನಾವಣೆ : ಮದ್ಯ ಮಾರಾಟ ನಿಷೇಧ

ಅಣ್ಣಿಗೇರಿ : ಪಟ್ಟಣದ ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಡಿಸೆಂಬರ್ 25 ಮಧ್ಯರಾತ್ರಿ 11. 59 ರಿಂದ ಡಿಸೆಂಬರ್ 27 ರ ಮಧ್ಯರಾತ್ರಿ 11.59 ವರಗೆ, ಪುರಸಭೆ ವ್ಯಾಪ್ತಿಯೊಳಗೆ ಬರುವ ಮದ್ಯದಂಗಡಿ, ಬಾರ್ ಆ್ಯಂಡ್ ರೆಸ್ಟೋರೆಂಟ್ ಸೇರಿದಂತೆ ಎಲ್ಲ ರೀತಿಯ ಮದ್ಯ ತಯಾರಿಕೆಯ ಘಟಕಗಳು, ಮದ್ಯ ಸಾಗಾಣಿಕೆ, ಮದ್ಯ ಸಂಗ್ರಹಣೆ ನಿಷೇಧಿಸಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 27 ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ, ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 135 (ಸಿ) ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಈ ಆದೇಶ ಹೊರಡಿಸಲಾಗಿದೆ.

Edited By : Nirmala Aralikatti
Kshetra Samachara

Kshetra Samachara

22/12/2021 05:26 pm

Cinque Terre

34.39 K

Cinque Terre

0

ಸಂಬಂಧಿತ ಸುದ್ದಿ