ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗ್ರಾಪಂ ಚುನಾವಣೆ: ಆಯುಧಗಳನ್ನು ಠೇವಣಿ ಮಾಡಲು ಆದೇಶ

ಧಾರವಾಡ: ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳ 6 ಗ್ರಾಮ ಪಂಚಾಯಿತಿಗಳಲ್ಲಿ ಜರುಗುವ ಸಾರ್ವತ್ರಿಕ ಚುನಾವಣೆ ಹಾಗೂ 9 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಜರುಗುವ ಉಪಚುನಾವಣೆಗೆ ಡಿಸೆಂಬರ್ 27 ರಂದು ಮತದಾನ ಜರುಗಲಿದೆ. ಆದ್ದರಿಂದ ಈ 15 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಎಲ್ಲ ಲೈಸೆನ್ಸ್‌ದಾರರು ಹೊಂದಿರುವ ತಾವು ಆಯುಧಗಳನ್ನು ಜೊತೆಗಿಟ್ಟುಕೊಂಡು ತಿರುಗಾಡುವುದನ್ನು ನಿಷೇಧಿಸಿ ಹಾಗೂ ತಾವು ಹೊಂದಿರುವ ಆಯುಧ, ಶಸ್ತ್ರಾಸ್ತ್ರಗಳನ್ನು ತಕ್ಷಣ ತಮ್ಮ ವ್ಯಾಪ್ತಿಯಲ್ಲಿ ಬರುವ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.

ಲೈಸೆನ್ಸ್‌ದಾರರು ಹೊಂದಿರುವ ಆಯುಧಗಳನ್ನು ಠೇವಣಿ ಮಾಡಿದ ಬಗ್ಗೆ ಅಗತ್ಯ ಸ್ವೀಕೃತಿ ಪತ್ರ ನೀಡಲು ಮತ್ತು ಚುನಾವಣೆ ಪ್ರಕ್ರಿಯೆಯು ಮುಗಿದು ಫಲಿತಾಂಶ ಹೊರಬಿದ್ದು ಒಂದು ವಾರದ ನಂತರ ಸಂಬಂಧಿಸಿದವರಿಗೆ ಆಯುಧವನ್ನು ಬಿಡುಗಡೆ ಮಾಡಲು ಕ್ರಮ ತೆಗೆದುಕೊಳ್ಳುವಂತೆ ಧಾರವಾಡ ಜಿಲ್ಲಾ ಪೊಲೀಸ್ ಆರಕ್ಷಕ ಅಧೀಕ್ಷಕರಿಗೆ ಡಿಸಿ ನಿರ್ದೇಶನ ನೀಡಿದ್ದಾರೆ.

ಈ ಆದೇಶವು ಸರ್ಕಾರಿ ಸೇವೆಯಲ್ಲಿ ನಿರತರಾಗಿರುವ ಅಧಿಕಾರಿ, ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಮತ್ತು ಬ್ಯಾಂಕ್ ಹಾಗೂ ಇನ್ನಿತರೆ ಖಾಸಗಿ ಸಂಸ್ಥೆಗಳ ಸುರಕ್ಷತೆಗಾಗಿ ರಾಷ್ಟ್ರೀಕೃತ ಅಥವಾ ಸಂಸ್ಥೆಯ ಬ್ಯಾಂಕುಗಳಿಗೆ ಅನ್ವಯಿಸುವುದಿಲ್ಲ. ಈ ಆದೇಶ ಉಲ್ಲಂಘಿಸಿದವರನ್ನು ಭಾರತೀಯ ದಂಡ ಸಂಹಿತೆಯ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಯಡಿಯಲ್ಲಿ ದಂಡನೆಗೆ ಗುರಿ ಪಡಿಸಲಾಗುವುದೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

22/12/2021 06:30 pm

Cinque Terre

28.69 K

Cinque Terre

1

ಸಂಬಂಧಿತ ಸುದ್ದಿ