ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನೀರಾವರಿ ಇಲಾಖೆ ಅಧಿಕಾರಿಗಳೇ ಇನ್ನು ಮುಂದೆ ನಿಮ್ಮ ಪ್ರವಾಸದ ಮಾಹಿತಿ ಸರ್ಕಾರಕ್ಕೆ ನೀಡಿ

ಧಾರವಾಡ: ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಶನಿವಾರ ಧಾರವಾಡದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ಜಲಸಂಪನ್ಮೂಲ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರು ಕೆಲ ಅಧಿಕಾರಿಗಳ ಮೇಲೆ ಗರಂ ಆಗಿ ಅವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು, ನೀರಾವರಿ ಇಲಾಖೆ ಮುಖ್ಯ ಎಂಜಿನಿಯರ್‌ ಸೇರಿದಂತೆ ಎಲ್ಲಾ ಅಧಿಕಾರಿಗಳು ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಸ್ವತಃ ಕೆನಾಲ್ ಮೇಲೆ ಹೋಗಿ ಪರಿಶೀಲನೆ ಮಾಡಬೇಕು. ಕೆಲ ಅಧಿಕಾರಿಗಳು ಯೋಜನೆ ಅನುಷ್ಠಾನದಲ್ಲಿ ಬಹಳ ನಿರ್ಲಕ್ಷ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಇಲಾಖೆಯ ಮುಖ್ಯ ಎಂಜಿನಿಯರ್ ಸೇರಿದಂತೆ ಇಲಾಖೆಯ ಎಲ್ಲ ಅಧಿಕಾರಿಗಳು ಕೆನಾಲ್ ಮೇಲೆ ಹೋಗಿ ಪರಿಶೀಲನೆ ಮಾಡಬೇಕು. ಹಾಗೆ ಮಾಡಿದಲ್ಲಿ ಮಾತ್ರ ಯೋಜನೆಗಳನ್ನು ನಾವು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಾಧ್ಯ. ಅಲ್ಲದೇ ಅಧಿಕಾರಿಗಳು ತಮ್ಮ ಪ್ರತಿದಿನದ ಪ್ರವಾಸದ ವಿವರ ಮತ್ತು ಯೋಜನೆಯ ಪ್ರಗತಿ ಪರಿಶೀಲನೆಯನ್ನು ತಪ್ಪದೇ ಸರ್ಕಾರಕ್ಕೆ ಕಳುಹಿಸಬೇಕು. ಯಾವ ಅಧಿಕಾರಿಗಳು ಈ ವರದಿ ಕಳುಹಿಸುವುದಿಲ್ಲವೋ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

12/02/2022 05:21 pm

Cinque Terre

125.28 K

Cinque Terre

3

ಸಂಬಂಧಿತ ಸುದ್ದಿ