ಧಾರವಾಡ: ಉತ್ತರ ಕರ್ನಾಟಕ ಭಾಗದ ಬಹುನಿರೀಕ್ಷಿತ ಹಾಗೂ ಹಕ್ಕೊತ್ತಾಯದ ಯೋಜನೆಯಾಗಿರುವ ಮಹಾದಾಯಿ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸಿದ ಬಜೆಟ್‌ನಲ್ಲಿ ಬರೊಬ್ಬರಿ 1 ಸಾವಿರ ಕೋಟಿ ಅನುದಾನ ಮೀಸಲಿರಿಸಿದ್ದಾರೆ.
ಮಹಾದಾಯಿ ನ್ಯಾಯಾಧೀಕರಣದ ತೀರ್ಪಿನನ್ವಯ ಹಂಚಿಕೆಯಾ ನೀರಿನ ಬಳಕೆಗೆ ರಾಜ್ಯದ ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗಳಿಗೆ ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ಅಗತ್ಯ ತಿರುವಳಿಗಳನ್ನು ಪಡೆಯಲು ಕ್ರಮ ವಹಿಸಲಾಗುತ್ತಿದೆ. ಈ ಯೋಜನೆ ಅನುಷ್ಠಾನಗೊಳಿಸಲು ಪ್ರಸಕ್ತ ಸಾಲಿನಲ್ಲಿ 1 ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಹೈಟೆಕ್ ಚಿಕಿತ್ಸೆಯನ್ನು ಲಭ್ಯಪಡಿಸಲು ಹುಬ್ಬಳ್ಳಿಯಲ್ಲಿ 250 ಕೋಟಿ ರೂಪಾಯಿ ವೆಚ್ಚದಲ್ಲಿ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ಬಜೆಟ್‌ನಲ್ಲಿ ಒಪ್ಪಿಗೆ ಸೂಚಿಸಲಾಗಿದೆ.
ಉತ್ತರ ಕರ್ನಾಟಕದ ಬಹುದಿನಗಳ ನಿರೀಕ್ಷೆಯ ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗ ಯೋಜನೆಯನ್ನು 927 ಕೋಟಿ ರೂಪಾಯಿ ವೆಚ್ಚದಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವುದು, ಹುಬ್ಬಳ್ಳಿ ಮತ್ತು ಬಳ್ಳಾರಿಯಲ್ಲಿ ಹೊಸದಾಗಿ ಅತ್ಯಾಧುನಿಕ ಉಪಕರಣಗಳನ್ನು ಹೊಂದಿರುವ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯಗನ್ನು ಆರಂಭಿಸಲು ಈಗಾಗಲೇ ಕ್ರಮ ವಹಿಸಲಾಗಿದೆ. ಪ್ರಯೋಗಾಲಯದ ಪರೀಕ್ಷೆಗಳ ಸಮಯ ಕಡಿತಗೊಳಿಸಿ ವರದಿಗಳು ಶೀಘ್ರವಾಗಿ ತನಿಖಾಧಿಕಾರಿಗಳ ಕೈಸೇರುವಂತೆ ಮಾಡಲು ಅಗತ್ಯವಿರುವ ಮಾನವ ಸಂಪನ್ಮೂಲವನ್ನು ಒದಗಿಸಲಾಗುವುದು. ಚೆನ್ನೈ, ಬೆಂಗಳೂರು, ಮುಂಬೈ ಕಾರಿಡಾರ್ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಕೈಗಾರಿಕೆಯನ್ನು ಸ್ಥಾಪಿಸಲು ಉತ್ತೇಜನ ನೀಡಲಾಗುವುದು. ರಾಜ್ಯದಲ್ಲಿ ದೊಡ್ಡ ಗಾತ್ರದ ಹೂಡಿಕೆ ಪ್ರದೇಶಗಳು ಮತ್ತು ಕೈಗಾರಿಕಾ ವಸಾಹತುಗಳ ಸ್ಥಾಪನೆ, ಕಾರ್ಯಾಚರಣೆ, ನಿಯಂತ್ರಣ ಮತ್ತು ನಿರ್ವಹಣೆಗಾಗಿ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮವನ್ನು ರಚಿಸಲಾಗುವುದು. ಆರಂಭದಲ್ಲಿ ತುಮಕೂರು ಮತ್ತು ಧಾರವಾಡ ಜಿಲ್ಲೆಗಳಲ್ಲಿ ವಿಶೇಷ ಹೂಡಿಕೆ ಪ್ರದೇಶವನ್ನ ಅಧಿಸೂಚಿಸಲಾಗುವುದು.
ಸಾಮಾಜಿಕ ಸೇವಾ ವಲಯದಲ್ಲಿ ಉತ್ತಮ ಕೆಲಸ ಮಾಡುತ್ತಿರುವ ಧಾರವಾಡದ ಕರ್ನಾಟಕ ಕ್ಯಾನ್ಸರ್ ಇನ್ಸಿಟ್ಯೂಟ್‌ಗೆ ವಿಶೇಷ ನೆರವು ನೀಡಲಾಗುವುದು, ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಡಾ.ಎಸ್.ವಿ.ಪಾಟೀಲ ಕೃಷಿ ಸಂಶೋಧನೆ, ತರಬೇತಿ ಹಾಗೂ ರೈತರ ಶ್ರೇಯೋಭಿವೃದ್ಧಿ ಪೀಠ ಸ್ಥಾಪಿಸಲಾಗುವುದು. ಕಾಳಿ ನದಿಯಿಂದ ನೀರನ್ನು ಬಳಸಿಕೊಂಡು ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ರೂಪಿಸಲಾಗುವುದು.
ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಧಾರವಾಡದಲ್ಲಿ ಕಸೂತಿ, ನವಲಗುಂದದಲ್ಲಿ ಜಮಖಾನಾ ಮೈಕ್ರೋಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು. ಹುಬ್ಬಳ್ಳಿಯಲ್ಲಿ ಕರ್ನಾಟಕ ಡಿಜಿಟಲ್ ಎಕನಾಮಿ ಮಿಷನ್‌ನಿಂದ ನಿರ್ವಹಿಸಲಾಗುವ ಕ್ಲಸ್ಟರ್‌ಗೆ 20 ಕೋಟಿಯಂತೆ ಬಿಹ್ಯಾಂಡ್ ಬೆಂಗಳೂರು ಕ್ಲಸ್ಟರ್ ಸೀಡ್ ಫೌಂಡ್ ಫಾರ್ ಸ್ಟಾರ್ಟ್‌ಪ್ಸ್ ಸ್ಥಾಪಿಸಲಾಗುವುದು. ಈ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ 12 ಕೋಟಿ ಅನುದಾನ ಒದಗಿಸಲಾಗುವುದು. ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಜವಳಿ ಪಾರ್ಕ್‌ಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು ಇದರಿಂದ ಸುಮಾರು 5 ಸಾವಿರ ಉದ್ಯೋಗ ಸೃಷ್ಠಿಯಾಗಲಿದೆ.
ದೀನದಯಾಳ್ ಉಪಾಧ್ಯಾಯ ಸೌಹಾರ್ಧ ವಿದ್ಯಾರ್ಥಿ ನಿಲಯ ಎಂಬ ಹೊಸ ಯೋಜನೆಯಡಿ ಹುಬ್ಬಳ್ಳಿ, ಧಾರವಾಡದಲ್ಲೂ ತಲಾ 1 ಸಾವಿರ ಸಾಮರ್ಥ್ಯದ ಬಹುಮಡಿಯ ವಿದ್ಯಾರ್ಥಿ ನಿಲಯ ಸಮುಚ್ಚಯಗಳನ್ನು 250 ಕೋಟಿ ರೂಪಾಯಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾಗುವುದು. ಹುಬ್ಬಳ್ಳಿ, ಧಾರವಾಡದಲ್ಲೂ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುವುದು. ಇದರಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಅಲ್ಪಸಂಖ್ಯಾತ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಧಾರವಾಡದಲ್ಲಿ ಎಫ್‌ಎಂಸಿಜಿ ಕ್ಲಸ್ಟರ್‌ನ್ನು ಅಭಿವೃದ್ಧಿಪಡಿಸಲಾಗುವುದು ಮತ್ತು ಈ ಕ್ಲಸ್ಟರ್‌ನಲ್ಲಿ ಬರುವ ಕೈಗಾರಿಕೆಗಳಿಗೆ ವಿಶೇಷ ಪ್ರೋತ್ಸಾಹಕ ಪ್ಯಾಕೇಜ ಘೋಷಿಸಲಾಗುವುದು.
ವಿದ್ಯಾರ್ಥಿಗಳು ನೋಡಿ ಕಲಿ ಮಾಡಿ ತಿಳಿ ಪರಿಕಲ್ಪನೆಯಡಿ ವಿಜ್ಞಾನ ತತ್ವಗಳನ್ನು ಅರ್ಥೈಸಿಕೊಳ್ಳಲು ಅನುವಾಗುಂತೆ, ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದಿಂದ ತಯಾರಿಸಲಾ್ ಲ್ಯಾಬ್-ಇನ್-ಎ ಕಿಟ್‌ಗಳನ್ನು ವಿತರಿಸಲಾಗುವುದು.
Kshetra Samachara
04/03/2022 03:19 pm