ಧಾರವಾಡ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊನ್ನೆ ಮಂಡಿಸಿದ ಬಜೆಟ್‌ನಲ್ಲಿ ವಿಶ್ವಕರ್ಮ ಸಮಾಜವನ್ನು ನಿರ್ಲಕ್ಷಿಸಿದ್ದಾರೆ ಎಂದು ಅಖಿಲ ಭಾರತೀಯ ವಿಶ್ವಕರ್ಮ ಛಾತ್ರಾ ಯುವ ಸಂಘವು ಆಕ್ರೋಶ ವ್ಯಕ್ತಪಡಿಸಿದೆ.
ಬಜೆಟ್‌ನಲ್ಲಿ ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನವನ್ನೇ ಮೀಸಲಿಟ್ಟಿಲ್ಲ. ಸಿಎಂ ಪೂರಕ ಬಜೆಟ್ ಮಂಡಿಸಿಲಿದ್ದಾರೆ ಎನ್ನಲಾಗುತ್ತಿದೆ. ಪೂರಕ ಬಜೆಟ್‌ನಲ್ಲಾದರೂ ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನ ಮೀಸಲಿಡಬೇಕು ಎಂದು ಸಂಘದ ರಾಷ್ಟ್ರೀಯ ಅಧ್ಯಕ್ಷ ಸಂತೋಷ ಬಡಿಗೇರ ಆಗ್ರಹಿಸಿದರು.
ಒಂದು ವೇಳೆ ರಾಜ್ಯ ಸರ್ಕಾರ ಪೂರಕ ಬಜೆಟ್‌ನಲ್ಲಿ ಅನುದಾನ ಮೀಸಲಿಡದೇ ಇದ್ದಲ್ಲಿ. ನಾವು ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿ ಕಚೇರಿ ಮುಂದೆ ನಮ್ಮ ಕುಲಕಸಬುಗಳನ್ನು ಮಾಡುವ ಮುಖಾಂತರ ಪ್ರತಿಭಟನೆ ನಡೆಸಲಿದ್ದೇವೆ. ಈ ವಿಷಯವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಗಮನಕ್ಕೂ ತರುತ್ತೇವೆ ಎಂದು ಸಮಾಜದ ಮುಖಂಡರು ಈ ಸಂದರ್ಭದಲ್ಲಿ ತಿಳಿಸಿದರು.
Kshetra Samachara
08/03/2022 07:56 pm