ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಸವಣ್ಣ ಮೂರ್ತಿ ತೆರವು; ಕಮಿಷನರ್-ಜನರ ನಡುವೆ ವಾಗ್ವಾದ

ಧಾರವಾಡ: ಬಸವಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಹು-ಧಾ ನಗರ ಪಾಲಿಕೆ ಆಯುಕ್ತ ಗೋಪಾಲಕೃಷ್ಣ ಹಾಗೂ ಸ್ಥಳೀಯರ ನಡುವೆ ವಾಗ್ವಾದ ನಡೆದಿದೆ.

ಹೌದು. ಧಾರವಾಡದ ಶ್ರೀನಗರ ವೃತ್ತದಲ್ಲಿ ಇಡಲಾಗಿದ್ದ ಬಸವಣ್ಣನ ಮೂರ್ತಿಯನ್ನು ಪಾಲಿಕೆ ಅಧಿಕಾರಿಗಳು ನಿನ್ನೆ (ಶನಿವಾರ) ತೆರವುಗೊಳಿಸಿದ್ದರು. ಮತ್ತೆ ಸ್ಥಳೀಯರು ಬಸವಣ್ಣನವರ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡಿದ್ದಾರೆ. ಇದರಿಂದ ಸ್ಥಳೀಯರಿಗೆ ಮತ್ತು ಪಾಲಿಕೆ ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು.

ಪಾಲಿಕೆ ಕಮಿಷನರ್ ಗೋಪಾಲಕೃಷ್ಣ ಅವರು, 'ನೀವೇ ಮೂರ್ತಿಯನ್ನು ತೆಗೆದುಹಾಕಿ' ಎಂದು ಜನರಿಗೆ ಎಚ್ಚರಿಕೆ ನೀಡಿದರು. ಇದಕ್ಕೆ ಒಪ್ಪದ ಸ್ಥಳೀಯರು, ಮೂರ್ತಿ ತೆರುವು ಮಾಡುವುದಕ್ಕೆ ನಾವು ಬಿಡುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

03/04/2022 06:24 pm

Cinque Terre

63.3 K

Cinque Terre

9

ಸಂಬಂಧಿತ ಸುದ್ದಿ