ಹುಬ್ಬಳ್ಳಿ: ಅದು ಹೆಸರಿಗೆ ಮಾತ್ರ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ಪಾಲಿಕೆಯಲ್ಲಿ ಒಂದಿಲ್ಲೊಂದು ಸಮಸ್ಯೆ ಉದ್ಬವಿಸುತ್ತಲೇ ಇದೆ. ಇಲ್ಲಿ ನಿಮ್ಮ ಹಕ್ಕನ್ನು ನೀವು ಪಡೆಯಲು ಕೋರ್ಟ್ ಮೊರೆ ಹೋಗಬೇಕಾಗಿದೆ. ಅರೇ ಏನಿದು ಸ್ಟೋರಿ ಅಂತೀರಾ ಇಲ್ಲಿದೆ ಕಂಪ್ಲಿಟ್ ಡಿಟೈಲ್ಸ್..
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಶೀಘ್ರ ನಡೆಸುವಂತೆ ಆಗ್ರಹಿಸಿ ಪಾಲಿಕೆಯ ಇಬ್ಬರು ಕಾಂಗ್ರೆಸ್ ಸದಸ್ಯರು ಧಾರವಾಡ ಹೈ ಕೋರ್ಟ್ ಮೊರೆ ಹೋಗಿದ್ದಾರೆ. ಹೌದು. 59ರ ಕಾಂಗ್ರೆಸ್ ಸದಸ್ಯೆ ಸುವರ್ಣ ಕಲ್ಲಕುಂಟಲ ಹಾಗೂ ವಾರ್ಡ್ ನಂ.14ರ ಕಾಂಗ್ರೆಸ್ ಸದಸ್ಯ ಶಂಭುಗೌಡ ಸಲ್ಮಾನಿ ಮೂರು ದಿನಗಳ ಹಿಂದೆಯೇ ಹೈ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಚುನಾವಣೆ ನಡೆದರೂ ಸದಸ್ಯರಿಗೆ ಅಧಿಕಾರ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಚುನಾಯಿತ ಸದಸ್ಯರು ಅಧಿಕಾರಿಕ್ಕಾಗಿ ಹೈ ಕೋರ್ಟ್ ಮೊರೆ ಹೋಗಿದ್ದಾರೆ.
ಇನ್ನೂ ನ್ಯಾಯಾಲಯ ಬುಧವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದು, ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಹಾಗೂ ಸರ್ಕಾರಿ ವಕೀಲರಿಗೆ ನೋಟೀಸ್ ನೀಡಲಾಗಿದೆ ಎಂದು ಅರ್ಜಿದಾರರ ಪರ ವಕೀಲರಾದ ಗಂಗಾಧರ ಜೆ.ಎಂ. ತಿಳಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಏ.22ಕ್ಕೆ ನಿಗದಿಪಡಿಸಲಾಗಿದೆ. ಕಳೆದ ಸೆಪ್ಟಂಬರ್ 06ರಂದು ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿತ್ತು. ಪಾಲಿಕೆ ಸದಸ್ಯರು ಚುನಾಯಿತಗೊಂಡು ಏಳು ತಿಂಗಳಾದರೂ ಮೇಯರ್ ಉಪಮೇಯರ್ ಚುನಾವಣೆ ನಡೆದಿಲ್ಲ. ಇದಕ್ಕೂ ಮೊದಲು ಎರಡು ವರ್ಷ ಮಹಾನಗರ ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತ ಇರಲಿಲ್ಲ. ಈ ನಿಟ್ಟಿನಲ್ಲಿ ವಿಳಂಬ ಧೋರಣೆಯನ್ನು ವಿರೋಧಿಸಿ ಅಧಿಕಾರಕ್ಕಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಒಟ್ಟಿನಲ್ಲಿ ಶತಾಯು ಗತಾಯು ಕಷ್ಟಪಟ್ಟು ಚುನಾವಣೆ ಗೆದ್ದಿರುವ ಚುನಾಯಿತ ಪ್ರತಿನಿಧಿಗಳು ಅಧಿಕಾರಿಕ್ಕಾಗಿ ಮತ್ತೇ ಹೋರಾಟದ ಹಾದಿಯನ್ನು ಹಿಡಿದಿರುವುದು ವಿಪರ್ಯಾಸಕರ ಸಂಗತಿಯಾಗಿದೆ. ಈ ಕುರಿತು ಹೈಕೋರ್ಟ್ ಸೂಕ್ತ ಆದೇಶ ಹೊರಡಿಸಿ ಅಭಿವೃದ್ಧಿ ಕಾರ್ಯಕ್ಕೆ ಮುನ್ನುಡಿ ಬರೆಯಬೇಕಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
14/04/2022 10:55 pm