ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಪಾಳೆಯ ದಿನಕ್ಕೊಂದು ರೀತಿಯ ನಿರ್ಧಾರದ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ಲ್ಯಾನ್ ಮಾಡುತ್ತಿದ್ದು, ಈಗ ಧಾರವಾಡ ಜಿಲ್ಲಾ ಪ್ರಮುಖರ ಸಭೆಯನ್ನು ಹುಬ್ಬಳ್ಳಿಯಲ್ಲಿ ನಡೆಸುತ್ತಿದೆ.
ಹೌದು. ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಮತ್ತಷ್ಟು ಕಾರ್ಯತಂತ್ರ ರೂಪಿಸುವ ಸದುದ್ದೇಶದಿಂದ ಈಗ ಸಚಿವರ ಸಮ್ಮುಖದಲ್ಲಿ ಖಾಸಗಿ ಹೋಟೆಲ್‌ನಲ್ಲಿ ಸಭೆಯನ್ನು ನಡೆಸಲಾಗುತ್ತಿದೆ. ಸಚಿವರಾದ ವಿ.ಸೋಮಣ್ಣ, ಶಂಕರಪಾಟೀಲ ಮುನೇನಕೊಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕ ಅಮೃತ ದೇಸಾಯಿ, ಜಿಲ್ಲಾ ಉಸ್ತುವಾರಿ ಹಾಲಪ್ಪ ಆಚಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಸಂಚಲನ ಸೃಷ್ಟಿಸಲು ಬಿಜೆಪಿ ಸನ್ನದ್ಧವಾಗಿದೆ.
Kshetra Samachara
25/04/2022 12:48 pm