ಹುಬ್ಬಳ್ಳಿ : ರಾಜ್ಯದಲ್ಲಿ ಸರ್ಕಾರಿ ನೌಕರಿ ಪಡೆಯಲು ಅವ್ಯವಾಹರ ನಡೆಯುತ್ತಿರುವ ಬಗ್ಗೆ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಪ್ರತಿಭಟನೆ ಮಾಡಿದೆ.
ಹುಬ್ಬಳ್ಳಿಯ ತಹಶೀಲ್ದಾರ ಕಚೇರಿ ಎದುರು ಪ್ರತಿಭಟಿಸಿದ ವಿದ್ಯಾರ್ಥಿಗಳು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಹಾಕುತ್ತ ತಹಶೀಲ್ದಾರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈಗಾಗಲೇ ರಾಜ್ಯದಲ್ಲಿ ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅದೇ ರೀತಿ ಹಲವಾರು ಸರ್ಕಾರಿ ನೌಕರಿಗಳಲ್ಲಿ ಪರ್ಸಂಟೇಜ್ ವ್ಯವಹಾರ ಹೆಚ್ಚಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಭ್ರಷ್ಟಾಚಾರ ತಾಂಡವಾಡುತ್ತಿದೆ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ವಿದೆ. ಯಾವ ಒಬ್ಬ ವಿದ್ಯಾರ್ಥಿಗೆ ಸರ್ಕಾರಿ ನೌಕರಿ ಸಿಕ್ಕಿಲ್ಲಾ ಎಂದು ರಾಜ್ಯ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಗರಂ ಆಗಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/04/2022 01:35 pm