ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿಯಿಂದ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ ಹೊರಟ್ಟಿ: ಕಡಪಾ ಮೈದಾನದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ

ಧಾರವಾಡ: ಬಸವರಾಜ ಹೊರಟ್ಟಿ ಅವರು ಗುರುವಾರ ಅಧಿಕೃತ ಬಿಜೆಪಿ ಅಭ್ಯರ್ಥಿಯಾಗಿ ವಿಧಾನ ಪರಿಷತ್‌ಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿಯ ನಾಯಕರು ಧಾರವಾಡದ ಕಡಪಾ ಮೈದಾನದಲ್ಲಿ ದೊಡ್ಡ ಮಟ್ಟದಲ್ಲಿಯೇ ಬಹಿರಂಗ ಸಮಾವೇಶ ಮಾಡುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ್‌, ಸಚಿವರಾದ ಹಾಲಪ್ಪ ಆಚಾರ್, ಶಿವರಾಮ ಹೆಬ್ಬಾರ್, ಸಿ.ಸಿ.ಪಾಟೀಲ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಸಿ.ಎಂ.ನಿಂಬಣ್ಣವರ ಸೇರಿದಂತೆ ನಾಲ್ಕು ಜಿಲ್ಲೆಗಳ ಬಿಜೆಪಿಯ ಶಾಸಕರುಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ಸಚಿವ ಹಾಲಪ್ಪ ಆಚಾರ್ ಈ ಬಾರಿ ದಾಖಲೆ ಮತಗಳ ಅಂತರದಿಂದ ಹೊರಟ್ಟಿ ಅವರನ್ನು ಗೆಲ್ಲಿಸುತ್ತೇವೆ ಎಂದರು. ಜಗದೀಶ ಶೆಟ್ಟರ್ ಮಾತನಾಡಿ ಈ ಹಿಂದೆ ಹೊರಟ್ಟಿ ವಿರುದ್ಧ ಬಿಜೆಪಿ ಸ್ಪರ್ಧೆ ಮಾಡುತ್ತಿತ್ತು. ಆದರೆ, ಈ ವರ್ಷ ಹಾಗಿಲ್ಲ, ಬಿಜೆಪಿಗೇ ಹೊರಟ್ಟಿ ಬಂದಿದ್ದಾರೆ. ಇದರಿಂದ ಬಿಜೆಪಿಗೆ ಹೆಚ್ಚು ಶಕ್ತಿ ಬಂದಿದೆ. ಎಲ್ಲಾ ದಾಖಲೆಗಳನ್ನು ಮುರಿದು ಹೊರಟ್ಟಿ ಈ ಬಾರಿ ಗೆಲ್ಲುತ್ತಾರೆ. ನಾಲ್ಕೂ ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಒಂದೇ ಹೌಸ್‌ನಲ್ಲಿ ಇಷ್ಟು ವರ್ಷಗಳ ಕಾಲ ಯಾವ ಸದಸ್ಯನೂ ಇಲ್ಲ. ಮೋದಿ ಅವರ ನಾಯಕತ್ವವನ್ನು ಹೊರಟ್ಟಿ ಒಪ್ಪಿದ್ದಾರೆ. ಹೊಸ ಶಿಕ್ಷಣ ನೀತಿಯಲ್ಲಿ ಹೊಸ ಕೌಶಲ್ಯದಲ್ಲಿ ವಿದ್ಯಾರ್ಥಿಗಳನ್ನು ತಯಾರಿ ಮಾಡಬೇಕಿದೆ. ನಾವು ಎನ್‌ಇಪಿ ತರುವಲ್ಲಿ ಮೊದಲಿದ್ದೇವೆ. ಇದನ್ನು ಆಂದೋಲನದ ರೀತಿಯಲ್ಲಿ ಮಾಡುತ್ತಿದ್ದೇವೆ. ಪಠ್ಯದಲ್ಲಿ ಪಾಠ ಸೇರಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಜೋಶಿ ತೀವ್ರ ವಾಗ್ದಾಳಿ ನಡೆಸಿದರು.

ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಮಾತನಾಡಿ, ರಾಜಕಾರಣಿಗಳ ಪರಿಸ್ಥಿತಿ ಅವರಿಗೇ ಗೊತ್ತು. ಸರಿಯಾಗಿ ನಿದ್ರೆ ಮಾಡಲು ಆಗುವುದಿಲ್ಲ. ನಾನು ಪ್ರಾಮಾಣಿಕವಾಗಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಸದ್ಯ ಬಿಜೆಪಿ ಸೇರಿದ್ದು, ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡುವುದಿಲ್ಲ. ಸತತ ಏಳು ಬಾರಿ ಶಿಕ್ಷಕರೇ ನನ್ನನ್ನು ಗೆಲ್ಲಿಸಿದ್ದಾರೆ ಎಂದರು. ಸಮಾವೇಶದಲ್ಲಿ ನೂರಾರು ಜನ ಶಿಕ್ಷಕರು, ಕಾರ್ಯಕರ್ತರು ಜೊತೆಯಲ್ಲಿ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬಿ ಫಾರ್ಮ್‌ನೊಂದಿಗೆ ಹೊರಟ್ಟಿ ನಾಮಪತ್ರ ಸಲ್ಲಿಸಿದರು.

Edited By : Somashekar
Kshetra Samachara

Kshetra Samachara

26/05/2022 05:53 pm

Cinque Terre

19.74 K

Cinque Terre

3

ಸಂಬಂಧಿತ ಸುದ್ದಿ