ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ಕ್ಷಣ ಗಣನೆ ಆರಂಭವಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದೆಂದು ಪಾಲಿಕೆ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ಪಾಲಿಕೆಗೆ ಚುನಾವಣೆ ನಡೆದು ಆರು ಏಳು ತಿಂಗಳುಗಳು ಕಳೆಯುತ್ತಾ ಬಂದಿದ್ದು, ಈವರೆಗೆ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಅಧಿಕಾರ ಸಿಕ್ಕಿಲ್ಲ. ಇಂದು ಮೇಯರ್ ಉಪಮೇಯರ್ ಚುನಾವಣೆ ನಡೆಯುತ್ತಿದ್ದು, ಯಾರ ಕೈಗೆ ಅಧಿಕಾರ ಸಿಗಲಿದ್ದಾರೆ ಎಂಬ ಕುತೂಹಲ ಎಲ್ಲರ ಮನಸ್ಸಿನಲ್ಲಿ ಮೂಡಿಸಿದೆ. ಹೀಗಾಗಿಯೇ ಬಿಜೆಪಿ ಈಗಾಗಲೇ ಶುಕ್ರವಾರ ರಾತ್ರಿ ಸಭೆ ನಡೆಸಿ ತಮ್ಮ ಅಭ್ಯರ್ಥಿಗಳನ್ನು ಫೈನಲ್ ಮಾಡಿಕೊಂಡಿದ್ದು, ಅಧಿಕೃತವಾಗಿ ಪ್ರಕಟ ಮಾಡುವುದೊಂದೇ ಬಾಕಿ ಉಳಿದಿದೆ.
ಇನ್ನು ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಸಂಚಾರಕ್ಕೆ ಅಡೆತಡೆಯಾಗಬಾರದೆಂಬ ಉದ್ದೇಶದಿಂದ ವಾಹನ ಪಾರ್ಕಿಂಗ್‌ಗೆ ನೆಹರು ಮೈದಾನದಲ್ಲಿ ವ್ಯವಸ್ಥೆ ಮಾಡಿದೆ. ಪೊಲೀಸರು ತಪಾಸಣೆ ನಡೆಸಿ ಪಾಲಿಕೆ ಆವರಣದಲ್ಲಿ ಪ್ರವೇಶಕ್ಕೆ ಅನುಮತಿ ನೀಡುತ್ತಿದೆ.
Kshetra Samachara
28/05/2022 04:48 pm