ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಗುತ್ತಿಗೆದಾರರು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಬಾಕಿ ಹಣವನ್ನು ಹಾಗೂ ಕಾಮಗಾರಿ ಹಣವನ್ನು ನೀಡದಿರುವ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ.
ಹೌದು.. ಸಿವಿಲ್ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರರು ಈ ಬಗ್ಗೆ ಸುಮಾರು ಸಾರಿ ಮನವಿ ಮಾಡಿದ್ದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. 36 ಕೋಟಿ ಮೊತ್ತದ ಕಾಮಗಾರಿಗಳಿಗೆ ಅಂಗೀಕಾರ ಪತ್ರ ನೀಡಿದೆ. 77 ಕೋಟಿ ಮೊತ್ತದ ಕಾಮಗಾರಿ ಕಡತಗಳು ಟೆಂಡರ್ ಮೌಲ್ಯಮಾಪನದ ಹಂತದಲ್ಲಿದ್ದು, ಶೀಘ್ರವಾಗಿ ಕಾರ್ಯಾದೇಶ ನೀಡಲಾಗುತ್ತದೆ.
ಹೀಗಿದ್ದರೂ ಗುತ್ತಿಗೆದಾರರಿಗೆ ಹಣ ನೀಡುವಲ್ಲಿ ಮೀನಾಮೇಷ ಏಣಿಸುತ್ತಿದ್ದಾರೆ. ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ ಎಂದು ಗುತ್ತಿಗೆದಾರರು ಪಾಲಿಕೆಗೆ ಕಾಮಗಾರಿ ಸ್ಥಗಿತದ ಮೂಲಕ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.
ಈಗಾಗಲೇ ಕಾಮಗಾರಿ ವಿಳಂಬದಿಂದ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಅನುಭವಿಸುವಂತಾಗಿದೆ. ಅದೆಷ್ಟೋ ಕಾಲೋನಿಯಲ್ಲಿ ಸೂಕ್ತ ಮೂಲಭೂತ ಸೌಕರ್ಯಗಳ ಸೌಲಭ್ಯ ಇಲ್ಲದಂತಾಗಿದ್ದು, ಹೀಗಿರುವಾಗ 360 ಕೋಟಿ ಬೃಹತ್ ಮೊತ್ತದ ಹಣ ಬರಲು 15 ವರ್ಷ ಕಾಯುತ್ತ ಕುಳಿತುಕೊಳ್ಳಬೇಕಾಗಿದೆ. ಕೂಡಲೇ ಗುತ್ತಿಗೆದಾರ ಸಮಸ್ಯೆ ಬಗೆಹರಿಸುವ ಕಾರ್ಯವನ್ನು ಮಾಡಬೇಕು ಎಂದು ಹು-ಧಾ ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘ ಆಗ್ರಹಿಸಿದ್ದಾರೆ.
ಒಟ್ಟಿನಲ್ಲಿ ನೀ ಕೊಡೆ ನಾ ಬಿಡೆ ಎಂಬುವಂತ ಪಾಲಿಕೆ ಹಾಗೂ ಗುತ್ತಿಗೆದಾರರ ನಡುವಿನ ಹಗ್ಗ ಜಗ್ಗಾಟದಲ್ಲಿ ಸಾರ್ವಜನಿಕರು ಸಮಸ್ಯೆ ಅನುಭವಿಸುವುದು ಖಂಡಿತ. ಈ ಕೂಡಲೇ ಪಾಲಿಕೆ ಆಯುಕ್ತರು ಹಾಗೂ ಗುತ್ತಿಗೆದಾರರು ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರಕ್ಕೆ ಬರಬೇಕಿದೆ.
Kshetra Samachara
03/08/2022 05:26 pm